ಕಲಬುರಗಿ, ಸೆ.20: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ–2026ರ ಅಂಗವಾಗಿ ಮತದಾರರ ನೋಂದಣಿಗಾಗಿ ಸೆಪ್ಟೆಂಬರ್ 20ರಂದು ಜಿಲ್ಲೆಯಾದ್ಯಂತ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ವಿಶೇಷ ಅಭಿಯಾನದ ಸಂದರ್ಭದಲ್ಲಿ ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿಗಳು (BLO) ಆಯಾ ಮತಗಟ್ಟೆಗಳಲ್ಲಿ ಹಾಜರಿದ್ದು, ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

18 ವರ್ಷ ಪೂರ್ಣಗೊಂಡಿರುವ ಅರ್ಹ ನಾಗರಿಕರು ಅಗತ್ಯ ದಾಖಲೆಗಳೊಂದಿಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಇರುವವರು ತಮ್ಮ ಹೆಸರು, ವಿಳಾಸ ಸೇರಿದಂತೆ ಇತರ ವಿವರಗಳಲ್ಲಿ ತಿದ್ದುಪಡಿ ಅಥವಾ ಬದಲಾವಣೆ ಅಗತ್ಯವಿದ್ದರೆ ಸಂಬಂಧಪಟ್ಟ ಅರ್ಜಿಗಳನ್ನು ಸಲ್ಲಿಸಿ ಸರಿಪಡಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಈ ವಿಶೇಷ ಅಭಿಯಾನದ ಸದುಪಯೋಗ ಪಡೆದುಕೊಂಡು, ಎಲ್ಲ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ನೋಂದಾಯಿತರಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor