Kalaburagi | ಆ.5ರಂದು ಗುಲ್ಬರ್ಗಾ ವಿವಿಯಲ್ಲಿ ‘ಕರ್ನಾಟಕದಲ್ಲಿ ಡಾ.ಅಂಬೇಡ್ಕರ್ ಹೆಜ್ಜೆಗಳು’ ವಿಶೇಷ ಉಪನ್ಯಾಸ

Update: 2026-08-04 18:56 IST

ಕಲಬುರಗಿ : ಗುಲ್ಬರ್ಗಾ ವಿಶ್ವವಿದ್ಯಾಲಯದ ಪಾಲಿ ಮತ್ತು ಬೌದ್ಧ ಅಧ್ಯಯನ ಸಂಸ್ಥೆ ವತಿಯಿಂದ ‘ಕರ್ನಾಟಕದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹೆಜ್ಜೆಗಳು’ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಗಸ್ಟ್ 5ರಂದು ಬೆಳಿಗ್ಗೆ 10.30ಕ್ಕೆ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಹರಿಹರ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ ಎಸ್. ಉಡಿಕೇರಿ ಉದ್ಘಾಟಿಸಲಿದ್ದು, ಕಲಾನಿಕಾಯದ ಡೀನ್ ಹಾಗೂ ಪಾಲಿ ಮತ್ತು ಬೌದ್ಧ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಎಚ್.ಟಿ. ಪೋತೆ ಅಧ್ಯಕ್ಷತೆ ವಹಿಸಲಿದ್ದಾರೆ.

ಸಹಕಾರ ಇಲಾಖೆಯ ನಿವೃತ್ತ ಉಪನಿರ್ದೇಶಕರೂ, ಹಲಸಂಗಿ ಮಧುರಚೆನ್ನ ಗೆಳೆಯರ ಬಳಗದ ಸದಸ್ಯರೂ ಆದ ಬಿ.ಆರ್. ಬನಸೋಡೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುವುದರ ಜೊತೆಗೆ ‘ಕರ್ನಾಟಕದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹೆಜ್ಜೆಗಳು’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಎಸ್.ಪಿ. ಸುಳ್ಳದ ಹಾಗೂ ವಿದ್ಯಾವಿಷಯಕ ಪರಿಷತ್ ಸದಸ್ಯ ಪ್ರೊ. ದಶರಥ ನಾಯಕ ಅವರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ವಿದ್ಯಾರ್ಥಿಗಳು, ಸಂಶೋಧಕರು, ಅಧ್ಯಾಪಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಪಾಲಿ ಮತ್ತು ಬೌದ್ಧ ಅಧ್ಯಯನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News