×
Ad

ಕಲಬುರಗಿ | ಯುವನಿಧಿ ಯೋಜನೆಯಡಿ ವಿಶೇಷ ನೋಂದಣಿ ಅಭಿಯಾನ

Update: 2025-07-12 17:05 IST

ಕಲಬುರಗಿ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಡಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ 2025ರ ಜು.7 ರಿಂದ ಆ. ವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗಪಡೆದುಕೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಈ ಯೋಜನೆಯಡಿ 2023-2024 ಮತ್ತು 2024-2025ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಪಾಸಾದ ನಿರುದ್ಯೋಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಪದವೀಧರರಿಗೆ ಪ್ರತಿ ತಿಂಗಳು 3,000 ರೂ. ಹಾಗೂ ಡಿಪ್ಲೋಮಾದಾರರಿಗೆ 1,500 ರೂ. ಗಳ ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತದೆ.

ಅರ್ಹ ಅಭ್ಯರ್ಥಿಗಳು ನೇರವಾಗಿ ಸೇವಾಸಿಂಧು ಪೋರ್ಟಲ್ https://sevasindhugs.karnataka.gov.in ನಲ್ಲಿ ನೋಂದಾಯಿಸಿಕೊಳ್ಳಬೇಕು. ಅಭ್ಯರ್ಥಿಗಳು ತಮ್ಮ ಸಮೀಪದ ಕರ್ನಾಟಕ ಓನ್/ ಗ್ರಾಮ ಓನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಹ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಖುದ್ದಾಗಿ ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News