ಕಲಬುರಗಿ | ಜ.21ರಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ
ಕಲಬುರಗಿ, ಜ. 18: ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕಾರ್ಯಕ್ರಮವನ್ನು ಜ.21ರಂದು ಬುಧವಾರ ಮಧ್ಯಾಹ್ನ 2 ಗಂಟೆಗೆ ಕಲಬುರಗಿಯ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಸಚಿವ ಡಾ. ಶರಣಪ್ರಕಾಶ ಪಾಟೀಲ, ಆಳಂದ ಶಾಸಕ ಬಿ.ಆರ್.ಪಾಟೀಲ್, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಝ್ ಫಾತೀಮಾ, ಜೇವರ್ಗಿ ಶಾಸಕ ಡಾ.ಅಜಯಸಿಂಗ್, ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯದ ಡೀನ್, ಕಲಾನಿಕಾಯ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ಮತ್ತು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎಚ್.ಟಿ.ಪೋತೆ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.