Kalaburagi | ಜಿಲ್ಲಾ ಮಟ್ಟದ ಥ್ರೋಬಾಲ್ನಲ್ಲಿ ಶ್ರೀ ಸಚ್ಚಿದಾನಂದ ಪ್ರೌಢಶಾಲೆಗೆ ಪ್ರಥಮ ಸ್ಥಾನ : ವಿಭಾಗ ಮಟ್ಟಕ್ಕೆ ಆಯ್ಕೆ
ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಥ್ರೋಬಾಲ್ ಸ್ಪರ್ಧೆಯಲ್ಲಿ ಚಿತ್ತಾಪುರ ತಾಲೂಕನ್ನು ಪ್ರತಿನಿಧಿಸಿದ್ದ ರಾವೂರ ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು, ಕಾರ್ಯದರ್ಶಿ ಈಶ್ವರ ಬಾಳಿ, ಸದಸ್ಯರಾದ ಡಾ. ಗುಂಡಣ್ಣ ಬಾಳಿ ಹಾಗೂ ಅಣ್ಣಾರಾವ ಬಾಳಿ ಅಭಿನಂದನೆ ಸಲ್ಲಿಸಿ, ಮುಂದಿನ ಹಂತದ ಸ್ಪರ್ಧೆಗೂ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮುಖ್ಯಗುರು ವಿದ್ಯಾಧರ ಖಂಡಾಳ, ದೈಹಿಕ ಶಿಕ್ಷಣ ಶಿಕ್ಷಕರಾದ ಶಿವಕುಮಾರ್ ಸರಡಗಿ ಮತ್ತು ಶರಣು ಸಜ್ಜನ, ಶಿಕ್ಷಕರಾದ ಈಶ್ವರಗೌಡ ಪಾಟೀಲ್, ಸಿದ್ದಲಿಂಗ ಬಾಳಿ, ಸುಗುಣಾ ಕೊಳಕೂರ, ಭುವನೇಶ್ವರಿ ಎಂ. ಹಾಗೂ ರಾಧಾ ರಾಠೋಡ್ ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಾದ ರಾಜು, ಶ್ರೀಮಂತ, ವೆಂಕಟೇಶ್, ಸುನೀಲ್, ನಿಖಿಲ್, ಅಭಿಷೇಕ್, ಮಹೇಶ್, ಉದಯ, ಶರಣು, ಸುಪ್ರೀತ್ ಹಾಗೂ ಹರ್ಷಿತ್ ಅವರನ್ನು ಇದೇ ಸಂದರ್ಭದಲ್ಲಿ ಸತ್ಕರಿಸಲಾಯಿತು.