ಕಲಬುರಗಿ | ಎಸೆಸೆಲ್ಸಿ ಪರೀಕ್ಷೆ: ಮಾ.6ರಂದು ಫೋನ್-ಇನ್-ಕಾರ್ಯಕ್ರಮ
Update: 2026-03-05 19:55 IST
ಕಲಬುರಗಿ: ಕಲಬುರಗಿ ಆಕಾಶವಾಣಿ ವತಿಯಿಂದ ಪ್ರಸಾರವಾಗುವ ಜನಪ್ರಿಯ ‘ಕಲ್ಯಾಣ ವಾಣಿ’ ಕಾರ್ಯಕ್ರಮದಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆಗೆ ಸಹಾಯಕವಾಗುವ ವಿಶೇಷ ನೇರ ಫೋನ್-ಇನ್ ಕಾರ್ಯಕ್ರಮವು ಇದೇ ಮಾ.6 ರಂದು ಬೆಳಿಗ್ಗೆ 11ಕ್ಕೆ ನಡೆಯಲಿದ್ದು, ಎಸೆಸೆಲ್ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಕಲಬುರಗಿ ಆಕಾಶವಾಣಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿದ್ಯಾರ್ಥಿಗಳು ಹಾಗೂ ಪೋಷಕರು ಪರೀಕ್ಷಾ ಸಿದ್ಧತೆ, ಪ್ರಶ್ನಾಪತ್ರಿಕೆಯ ಮಾದರಿ, ಸಮಯ ನಿರ್ವಹಣೆ ಹಾಗೂ ಅಂಕ ಗಳಿಸುವ ಸೂತ್ರಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ತಜ್ಞರಿಂದ ನೇರವಾಗಿ ಮಾರ್ಗದರ್ಶನ ಪಡೆಯಬಹುದು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಲಿದ್ದಾರೆ.