×
Ad

ಕಲಬುರಗಿ | ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ರಾಜ್ಯ ಮಾಹಿತಿ ಆಯೋಗದ ಆಯುಕ್ತ

Update: 2025-03-27 16:16 IST

ರವೀಂದ್ರ ಗುರುನಾಥ ಡಾಕಪ್ಪ, ಲೋಕಾಯುಕ್ತ ಪೊಲೀಸರು

ಕಲಬುರಗಿ : ಬ್ಲಾಕ್ ಲಿಸ್ಟ್ ನಲ್ಲಿರುವ ಆರ್ ಟಿಐ ಕಾರ್ಯಕರ್ತರ ಹೆಸರು ತೆಗೆಯಲು ಹಣದ ಬೇಡಿಕೆ ಇಟ್ಟಿದ್ದ ರಾಜ್ಯ ಮಾಹಿತಿ ಆಯೋಗದ ಆಯುಕ್ತರೊಬ್ಬರು ಗುರುವಾರ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕಲಬುರಗಿ ಪೀಠದ ಆಯುಕ್ತರಾಗಿರುವ ರವೀಂದ್ರ ಗುರುನಾಥ ಡಾಕಪ್ಪ ಲೋಕಾಯುಕ್ತರ ಬಲೆಗೆ ಬಿದ್ದಿರುವ ಅಧಿಕಾರಿ ಎಂದು ತಿಳಿದುಬಂದಿದೆ.

ರವೀಂದ್ರ ಗುರುನಾಥ ಡಾಕಪ್ಪ ಅವರು, ಕಲಬುರಗಿಯ ತಮ್ಮ ಕಚೇರಿಯಲ್ಲಿ ಹಣ ತೆಗೆದುಕೊಳ್ಳುತ್ತಿದ್ದ ವೇಳೆಯಲ್ಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಡಾಕಪ್ಪ ಅವರು ಬ್ಲಾಕ್ ಲಿಸ್ಟ್ ನಲ್ಲಿರುವ ಆರ್ ಟಿಐ ಕಾರ್ಯಕರ್ತರ ಹೆಸರು ತೆಗೆಯಲು ಆರ್ ಟಿಐ ಕಾರ್ಯಕರ್ತ ಸಾಯಿಬಣ್ಣ ಸಾಸಿ ಬೆನಕನಹಳ್ಳಿಯಿಂದ 3 ಲಕ್ಷ ರೂ. ಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈಗಾಗಲೇ 1 ಲಕ್ಷ ರೂ. ಗಳನ್ನು ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡಿದ್ದ ಆಯುಕ್ತರು, ಉಳಿದ ಹಣ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ಲೋಕಾಯುಕ್ತ ಡಿವೈಎಸ್ ಪಿ ಗೀತಾ ಬೇನಾಳ್ ನೈತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಸದ್ಯ ಗುರುನಾಥ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿಸಿದ್ದಾರೆ.

ಎಸ್‌.ಪಿ ಬಿಕೆ. ಉಮೇಶ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೀತಾ ಬೆನಾಳ, ಪೊಲೀಸ್ ಇನ್‌ಸ್ಪೆಕ್ಟರ್ ಅರುಣ್ ಕುಮಾರ್ ಹಾಗೂ ಸಿಬ್ಬಂದಿಯವರಾದ ಮಲ್ಲಿನಾಥ್, ಹನುಮಂತ, ಬಸವರಾಜ್, ಪೈಮೊದಿನ್, ತಂಡದಿಂದ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News