×
Ad

ಕಲಬುರಗಿ | ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯಮಟ್ಟದ ಅನಿರ್ಧಿಷ್ಟಾವಧಿ ಧರಣಿ

Update: 2024-12-26 15:57 IST

ಕಲಬುರಗಿ : ರಾಜ್ಯದಲ್ಲಿರುವ 42 ಸಾವಿರ ಆಶಾ ಕಾರ್ಯಕರ್ತರ ಮಾಸಿಕ ಗೌರವಧನ ನಿಗದಿಪಡಿಸುವಂತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜ.7ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯಮಟ್ಟದ ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ಸುದ್ಧಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರಕಾರದ ಪ್ರೋತ್ಸಾಹಧನ ಮತ್ತು ರಾಜ್ಯ ಸರಕಾರದ ನಿಶ್ಚಿತ ಗೌರವಧನ ಸೇರಿ ಮಾಸಿಕವಾಗಿ 15 ಸಾವಿರ ರೂ. ನಿಗದಿಪಡಿಸಬೇಕು, ನಗರ ಆಶಾ ಕಾರ್ಯಕರ್ತೆಯರ ಖರ್ಚು ವೆಚ್ಚಗಳಿಗೆ ಅನುಗುಣವಾಗಿ 2,000 ರೂ. ಹೆಚ್ಚಿಸಬೇಕು, ಸೇವಾ ನಿವೃತ್ತಿಯ ಪಡೆಯುವ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇರುವಂತೆ ನಮ್ಮಲ್ಲೂ 5 ಲಕ್ಷಕ್ಕೆ ಏರಿಸಬೇಕು ಎಂದು ಒತ್ತಾಯಿಸಿದರು.

ಮೊಬೈಲ್ ಕೆಲಸಗಳನ್ನು ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಡಬೇಕು, ಮೊಬೈಲ್ ಕೊಟ್ಟವರಿಗೆ ಡಾಟಾ ಸಹ ಒದಗಿಸಿ, ಅದಕ್ಕೆ ಪ್ರೋತ್ಸಾಹಧನ ನಿಗದಿಪಡಿಸಬೇಕು, ಆಶಾ ಕಾರ್ಯಕರ್ತೆಯರನ್ನು ಸರಕಾರಿ ನೌಕರರೆಂದು ಪರಿಗಣಿಸಿ ನಿಯಮಾನುಸಾರ ಗ್ರಾಜ್ಯೂಟಿ, ಪಿಎಫ್ ಸೇರಿದಂತೆ ಇತರೆ ಸೌಲಭ್ಯ ನೀಡಬೇಕೆಂದು ಆಗ್ರಹಿಸಿದರು.

ಬೆಂಗಳೂರಿನ ಅನಿರ್ಧಿಷ್ಟಾವಧಿ ಧರಣಿಗೆ ಜಿಲ್ಲೆಯಿಂದ 1500 ಆಶಾ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಿವಲಿಂಗಮ್ಮ, ವಿ.ಜಿ.ದೇಸಾಯಿ, ಸಂಗೀತಾ, ಗೀತಾ, ಎಸ್.ಎಂ.ಶರ್ಮಾ ಸೇರಿದಂತೆ ಇತರರು ಹಾಜರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News