×
Ad

ಕಲಬುರಗಿ | ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

Update: 2026-06-24 15:52 IST

ಕಲಬುರಗಿ: ವಿದ್ಯಾರ್ಥಿನಿಯೊಬ್ಬಳು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೇಡಂ ನಗರದ ವಿಶ್ವನಗರದಲ್ಲಿರುವ ಮೆಟ್ರಿಕ್ ನಂತರದ ಬಿಸಿಎಂ ಬಾಲಕಿಯರ ವಸತಿ ನಿಲಯದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದ ಚಂದ್ರಿಕಾ ತಿಪ್ಪೇಸ್ವಾಮಿ (19) ಎಂದು ಗುರುತಿಸಲಾಗಿದೆ.

ಚಂದ್ರಿಕಾ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎಸ್‌ಸಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ಬಿಸಿಎಂ ವಸತಿ ನಿಲಯದಲ್ಲಿ ವಾಸವಾಗಿದ್ದಳು. ಆರೋಗ್ಯ ಸಮಸ್ಯೆಯಿಂದಾಗಿ ಆಕೆ ಪ್ರತ್ಯೇಕವಾಗಿ ಕೋಣೆಯೊಂದರಲ್ಲಿ ವಾಸವಾಗಿದ್ದಳು ಎಂದು ತಿಳಿದುಬಂದಿದೆ.

ಬುಧವಾರ ಬೆಳಿಗ್ಗೆ 10 ಗಂಟೆಯ ಬಳಿಕ ವಸತಿ ನಿಲಯದಲ್ಲಿ ಯಾರೂ ಇಲ್ಲದ ಸಂದರ್ಭ ಆಕೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

ಘಟನಾ ಸ್ಥಳಕ್ಕೆ ಸಿಪಿಐ ಮಹಾದೇವ ದಿಡ್ಡಿಮನಿ ಹಾಗೂ ಪಿಎಸ್‌ಐ ಉಪೇಂದ್ರ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News