×
Ad

ಕಲಬುರಗಿ | ಬಿಎಡ್‍ನಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

Update: 2025-03-11 22:21 IST

ಕಲಬುರಗಿ: ನಗರದ ನಾಗಾಂಬಿಕಾ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿಎಡ್‍ನಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಮೇಯರ್ ಯಲ್ಲಪ್ಪ ಎಸ್ ನಾಯ್ಕೋಡಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿ ಅವರು, ಬಿ.ಎಡ್. ಪದವೀಧರರು ಭಾವಿ ಭವಿಷ್ಯದ ಶಿಕ್ಷಕರು, ರಾಷ್ಟ್ರ ನಿರ್ಮಾಣದ ನಿರ್ಮಾಪಕರು. ಮುಂದಿನ ಮಕ್ಕಳಿಗೆ ಸಂಸ್ಕಾರದ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂದು ಹೇಳಿದರು.

ಮಹಿಳಾ ಬಿ.ಎಡ್ ಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯಕ್ಕೆ 6 ಮತ್ತು 7 ನೇ ರ್‍ಯಾಂಕ್ ಪಡೆದಿದ್ದು, ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣ ಸಿಗುವದನ್ನು ಎತ್ತಿ ತೋರಿಸುತ್ತದೆ. ಮುಂದಿನ ದಿನಗಳಲ್ಲಿ ಕಾಲೇಜಿನ ವಿದ್ಯಾರ್ಥಿನಿಯರು ವಿಶ್ವ ವಿದ್ಯಾಲಯಕ್ಕೆ ಪ್ರಥಮ ರ್‍ಯಾಂಕ್ ಪಡೆಯಲೆಂದು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬಿರಬಿಟ್ಟಿ, ನವ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ದಯಾನಂದ ಪಾಟೀಲ್, ಕಾಲೇಜಿನ ಸಂಸ್ಥಾಪಕರು ಮತ್ತು ಪ್ರಾಚಾರ್ಯರಾದ ಡಾ.ಅರವಿಂದಕುಮಾರ ಬಿರಾದಾರ್ ಮಾತನಾಡಿದರು.

ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಾದ ಸ್ವಾತಿ, ಸುಭಾಶ್ಚಂದ್ರ ಮತ್ತು ಸಿಮ್ರಾ ನಿಶಾತ್ ಬಂದೆನವಾಜ್ ಇಬ್ಬರು ವಿದ್ಯಾರ್ಥಿನಿಯರಿಗೆ ಸತ್ಕರಿಸಲಾಯಿತು. ವಿವಿಧ ಶಾಲೆಯ ಮುಖ್ಯೋಪಾಧ್ಯಾಯರನ್ನು ಸನ್ಮಾನಿಸಲಾಯಿತು. ನಗರ ಕೇಂದ್ರ ಗ್ರಂಥಾಲಯ ನಾಮ ನಿರ್ದೇಶನ ಸದಸ್ಯ ಶಾಂತಕುಮಾರ್ ಬಿರಾದಾರ್, ತಾಲೂಕು ವೀರಶೈವ ಮಹಾಸಭಾ ಗೌರವ ಅಧ್ಯಕ್ಷ ಜಗನ್ನಾಥ ಪಾಟೀಲ್, ವಿಶ್ವನಾಥ ಪಾಟೀಲ್ ಗೌನಳ್ಳಿ, ನಾಗಲಿಂಗಯ್ಯ ಮಠಪತಿ, ಶಿವಾನಂದ ಮಠಪತಿ, ಅಂಬಾರಾಯ ಬೆಳಕೋಟಾ ಅವರನ್ನು ಸನ್ಮಾನಿಸಲಾಯಿತು.

ಉಪನ್ಯಾಸಕರಾದ ಗಣಪತಿರಾವ್‌ ಅವರು ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ವೈಷ್ಣವಿ ಗುರುದತ್ತ ನಿರೂಪಣೆ ಮಾಡಿದರು. ಸಬೀಹಾ ಸುಲ್ತಾನಾ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News