×
Ad

Kalaburagi | ಹಡಪದ ಸಮಾಜದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

Update: 2026-06-23 18:28 IST

ಕಲಬುರಗಿ : ಜಿಲ್ಲಾ ಹಡಪದ ಸಮಾಜದ ಸಹಯೋಗದಲ್ಲಿ ತಾಲೂಕು ಹಡಪದ ಸಮಾಜದ ನೇತೃತ್ವದಲ್ಲಿ ಅಂ. ಬಸವಪ್ರಿಯ ಅಪ್ಪಣ್ಣ ಮಹಾಸ್ವಾಮಿಗಳ 18ನೇ ಪುಣ್ಯಸ್ಮರಣೆ ಅಂಗವಾಗಿ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಗರದ ಕನ್ನಡ ಭವನದಲ್ಲಿ ನಡೆಯಿತು.

ಹಡಪದ ಅಪ್ಪಣ್ಣ ಮಂದಿರದ ಶ್ರೀ ಬಾಲ ಬ್ರಹ್ಮಚಾರಿ ರಾಜಶಿಯೋಗಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಕಾಂಗ್ರೆಸ್ ಮುಖಂಡ ಶರಣು ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಡಾ.ರಮೇಶ್ ಲಂಡನಕರ್, ಹಡಪದ ಅಪ್ಪಣ್ಣ ಅಧ್ಯಯನ ಪೀಠದ ನಿರ್ದೇಶಕ ಡಾ.ಸುರೇಶ್ ಜಂಗೆ, ಸರ್ಕಾರಿ ಮಹಿಳಾ ಮಹಾವಿದ್ಯಾಲಯದ ಡಾ.ಪದ್ಮರಾಜ ರಾಸಣಗಿ ಸೇರಿದಂತೆ ಹಲವು ಗಣ್ಯರು ಮಾತನಾಡಿ, ಶಿಕ್ಷಣದ ಮಹತ್ವ ಹಾಗೂ ಸಮಾಜದ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ವಿವರಿಸಿದರು.

ಜಿಲ್ಲಾ ಹಡಪದ ಸಮಾಜದ ಅಧ್ಯಕ್ಷ ಈರಣ್ಣ ಸಿ.ಹಡಪದ ಸಣ್ಣೂರ ಅಧ್ಯಕ್ಷತೆ ವಹಿಸಿದ್ದರೆ, ತಾಲೂಕು ಹಡಪದ ಸಮಾಜದ ಅಧ್ಯಕ್ಷ ಚಂದ್ರಶೇಖರ ಹಡಪದ ತೊನಸನಹಳ್ಳಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ವಕೀಲ ಪ್ರಕಾಶ ಅವರಾದಕರ್, ಉದ್ಯಮಿ ಸುಭಾಷಚಂದ್ರ ಸೊನ್ನ, ಆದಾಯ ತೆರಿಗೆ ಸಲಹೆಗಾರ ಚನ್ನಬಸಪ್ಪ ಉಡಗಿ ಸೇರಿದಂತೆ ಸಮಾಜದ ಅನೇಕ ಮುಖಂಡರು, ಗಣ್ಯರು, ವಿದ್ಯಾರ್ಥಿಗಳು ಹಾಗೂ ಪಾಲಕರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ 2025-26ನೇ ಸಾಲಿನ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News