ಕಲಬುರಗಿ | ಟ್ಯಾಂಕರ್-ಬೈಕ್ ನಡುವೆ ಢಿಕ್ಕಿ; ಸ್ಥಳದಲ್ಲೇ ಇಬ್ಬರು ಮೃತ್ಯು
Update: 2025-10-21 21:42 IST
ಕಲಬುರಗಿ: ಟ್ಯಾಂಕರ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ನಗರದ ಹುಮನಾಬಾದ್ ರಿಂಗ್ ರಸ್ತೆಯ ಪೆಟ್ರೋಲ್ ಬಂಕ್ ಸಮೀಪ ಮಂಗಳವಾರ ರಾತ್ರಿ ನಡೆದಿದೆ.
ಮೃತರನ್ನು ನಗರದ ಯದುಲ್ಲಾ ಕಾಲೋನಿಯ ನಿವಾಸಿ ಅಹೆಮದ್ ಶೇಖ್ ಗುಲಾಮ್ ( 55) ಹಾಗೂ ಸರ್ವರ್ ಜುಬೈರ್ (18) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟವರ ಮೃತದೇಹವನ್ನು ಮರಣೋತ್ತರ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಟ್ರಾಫಿಕ್ - 2 ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.