×
Ad

ಕಲಬುರಗಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಶಿಕ್ಷಕ ಬಂಧನ

Update: 2024-12-03 14:48 IST

ಆರೋಪಿ ಹಾಜಿಮಲಂಗ ಗಣಿಯಾರ

ಕಲಬುರಗಿ : ಖಾಸಗಿ ಶಾಲೆಯ ಶಿಕ್ಷಕನೊಬ್ಬ 11 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ ಘಟನೆ ಯಡ್ರಾಮಿ ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಖಾಸಗಿ ಶಾಲೆಯ ಮುಖ್ಯಸ್ಥ ಹಾಜಿಮಲಂಗ ಗಣಿಯಾರ ಎಂಬ ಆರೋಪಿಯನ್ನು ಇದೀಗ ಯಡ್ರಾಮಿ ಪೊಲೀಸರು ಬಂಧಿಸಿದ್ದಾರೆ.

ಇನ್ನು ಅತ್ಯಾಚಾರ ಘಟನೆಯನ್ನು ಖಂಡಿಸಿ, ಆರೋಪಿಗೆ ಉಗ್ರಶಿಕ್ಷೆಗೆ ಆಗ್ರಹಿಸಿ ತಾಲೂಕಿನ ಕರವೇ, ರೈತ, ಹಾಗೂ ವಿವಿಧ ಸಂಘಟನೆಗಳು ಯಡ್ರಾಮಿ ಬಂದ್ ಮಾಡಿದ್ದಾರೆ. ಪ್ರತಿಭಟನೆ ಬಿರುಸು ಪಡೆದಿದ್ದು, ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿದು ಬಂದಿದೆ.

ಶಾಲೆಯೊಂದರಲ್ಲಿ ಸಂತ್ರಸ್ತ ಮಗು ಕಳೆದ ಎರಡು-ಮೂರು ವರ್ಷಗಳಿಂದ ಓದುತ್ತಿದ್ದಳು. ಶಾಲೆಯ ಮುಖ್ಯಸ್ಥ ಹಾಜಿಮಲಂಗ ಗಣಿಯಾರ ಕಳೆದ ಎರಡು ದಿನದ ಹಿಂದೆ ಶಾಲೆಯಲ್ಲಿ ವಿದ್ಯಾರ್ಥಿಯ ಮೇಲೆ ಅತ್ಯಾಚಾರಗೈದಿದ್ದಾನೆ ಎನ್ನಲಾಗಿದೆ.

ಈ ವಿಷಯವನ್ನು ಮನೆಯಲ್ಲಿ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಮಗು ಮನೆಯಲ್ಲಿ ತಿಳಿಸಲು ಹಿಂಜರಿದಿದೆ. ನಂತರ ಪಕ್ಕದ ಮನೆಯವರ ಮುಂದೆ ಮಗು ವಿಷಯ ತಿಳಿಸಿದ್ದು, ಅವರು ಮಗುವಿನ ತಂದೆ, ತಾಯಿಗೆ ವಿಷಯ ತಿಳಿಸಿದ್ದಾರೆ. ನಂತರ ಸಂತ್ರಸ್ತ ಮಗುವಿನ ಪೋಷಕರು ಸೋಮವಾರ ಸಂಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಯಡ್ರಾಮಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News