Kalaburagi | ಶಿಕ್ಷಕರು ಉತ್ತಮ ಸಮಾಜ ನಿರ್ಮಾಣದ ಶಿಲ್ಪಿಗಳು: ಶಾಸಕ ಅಲ್ಲಮಪ್ರಭು ಪಾಟೀಲ್
ಕಲಬುರಗಿ: ಶಿಕ್ಷಕರು ಸಮಾಜದ ಶಿಲ್ಪಿಗಳಾಗಿದ್ದು, ವಿದ್ಯಾರ್ಥಿಗಳಲ್ಲಿ ಜ್ಞಾನ, ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಮೂಲಕ ಉತ್ತಮ ಸಮಾಜ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ಹೇಳಿದರು.
ನಗರದ ಬ್ರಹ್ಮಪುರದಲ್ಲಿರುವ ಶ್ರೀ ಶರಣಬಸವೇಶ್ವರ ದೇವಾಲಯದ ಆವರಣದಲ್ಲಿನ ಅಖಿಲ ಭಾರತ ಶಿವಾನುಭವ ಮಂಟಪದಲ್ಲಿ ಶನಿವಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಮತ್ತು ಶಿಕ್ಷಕರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ, ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಕ್ಷೇತ್ರ ಸಮನ್ವಯಾಧಿಕಾರಿ ವೀಣಾ ನಾಯ್ಕರ್, ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಜಮಖಂಡಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಸವರಾಜ ರಟಕಲ್, ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳ್ಳಂಡಗಿ, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ ಹೂಗಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಸಂತೋಷ ಗಂಗೂ, ತಾಲೂಕು ಅಧ್ಯಕ್ಷ ಸಂಗಣ್ಣ ಜಾಬಾ, ಕಾರ್ಯದರ್ಶಿ ಪರಮೇಶ್ವರ ದೇಸಾಯಿ, ರಾಜು ದೊಡ್ಡಮನಿ, ಸೈಯದ್ ಎಸ್.ಜೆ., ಮುರಳಿಧರ ಟೊಣಪೆ, ಜಮೀಲ್ ಇಮ್ರಾನ್, ಮಹಾದೇವ ಚಿತಲಿ, ಅಶೋಕ, ಪ್ರಭುಲಿಂಗ ಕುಂಬಾರ, ಸಿದ್ದಪ್ಪ ಎನ್. ಗುತ್ತಾ, ರಘುನಾಥ ಮಸರಬೊ, ವಿಜಯಕುಮಾರ ಪಾಟೀಲ, ಅಂಬರೀಶ, ಸೂರ್ಯಕಾಂತ ದೊಡ್ಡಮನಿ, ನಿಂಗರಾಜ ಎಚ್. ಪಾಟೀಲ, ಶಿವಕುಮಾರ ಹಿರೇಮಠ, ಭಾನುಕುಮಾರ ಗಿರೆಗೋಳ, ಬಸವರಾಜ ಹೇರೂರ, ಮಲ್ಲಣ್ಣ ಬಿದನೂರ, ಹಣಮಂತರಾವ ಕುಲಕರ್ಣಿ, ಉಮೇಶ ರಾಠೋಡ, ಮುಜಮ್ಮಿಲ್ ಶಂಭಾವಿ ಸೇರಿದಂತೆ ವಿವಿಧ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.