×
Ad

ಕಲಬುರಗಿ| ಸೆ.7 ರಂದು ಶಿಕ್ಷಕರ ದಿನಾಚರಣೆ, ಪ್ರತಿಭಾ ಪುರಸ್ಕಾರ

Update: 2025-09-06 22:54 IST

ಕಲಬುರಗಿ: ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಸೆಪ್ಟಂಬರ್ 7 ರಂದು ಸಂಜೆ 5 ಗಂಟೆಗೆ ನಗರದ ಸೇಡಂ ರಸ್ತೆಯಲ್ಲಿರುವ ಎಂ.ಆರ್.ಎಂ.ಸಿ ಸ್ಯಾಕ್ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಕಲಬುರಗಿ ವಿಭಾಗದ ಪ್ರಮುಖ ಚಂದ್ರಶೇಖರ್ ಪಾಟೀಲ್ ಯಳಸಂಗಿ ಹಾಗೂ ಜಿಲ್ಲಾಧ್ಯಕ್ಷ ಸಂಜೀವಕುಮಾರ ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಜೀವಕುಮಾರ ಪಾಟೀಲ್, ಯಡ್ರಾಮಿ ವಿರಕ್ತ ಮಠದ ಸಿದ್ಧಲಿಂಗ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವರು, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಕೆಕೆ ಆರ್ ಡಿಬಿ ಕಾರ್ಯದರ್ಶಿ ನಳಿನ್ ಅತುಲ್, ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್. ಡಿ ಅವರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆಯಲ್ಲಿ ಅತಿಥಿಗಳಾಗಿ ಚೆನ್ನವೀರ ಆರ್.ಎಂ ಹಾಗೂ ಮಹೇಶ್ ಬಸರಕೋಡ ಅವರು ಸಮಾರಂಭದಲ್ಲಿ ಉಪಸ್ಥಿತರಿರಲಿದ್ದು, ಕೇಂದ್ರೀಯ ವಿವಿಯ ಪ್ರಾಧ್ಯಾಪಕ ಗಣಪತಿ ಸಿನ್ನೂರ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News