ಕಲಬುರಗಿ | ಅತಿಥಿ ಶಿಕ್ಷಕರ ತಾತ್ಕಾಲಿಕ ನೇಮಕಾತಿ: ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ವಿಸ್ತರಣೆ
ಕಲಬುರಗಿ: ಪ್ರಸಕ್ತ 2025- 26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಆಯ್ದ ಮದರಸಾಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಧಾರ್ಮಿಕ ಶಿಕ್ಷಣದೊಂದಿಗೆ ಎನ್‌ಐಓಎಸ್ ಮುಖಾಂತರ ಔಪಚಾರಿಕ ಶಿಕ್ಷಣವನ್ನು ನೀಡುವುದರ ಮೂಲಕ ಅವರ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಅಜೀಂ ಪ್ರೇಮ್ ಜೀ ಫೌಂಡೇಶನ್ ಇವರ ಸಹಯೋಗದೊಂದಿಗೆ ಔಪಚಾರಿಕ ಶಿಕ್ಷಣ ವಿಷಯಗಳಾದ ಕನ್ನಡ, ಇಂಗ್ಲೀಷ್, ವಿಜ್ಞಾನ ಹಾಗೂ ಗಣಿತ ವಿಷಯಗಳನ್ನು ಬೋಧಿಸಲು ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2025ರ ಅ.13 ರವರೆಗೆ ವಿಸ್ತರಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಡಿ.ಇಐ.ಇಡಿ ((D.EI.Ed) ) ಅಥವಾ ಬಿ.ಇಡಿ. ವಿದ್ಯಾರ್ಹತೆ ಹೊಂದಿರಬೇಕು. ಉರ್ದು ಭಾಷೆಯಲ್ಲಿ ಕುಶಲತೆಯನ್ನು ಹೊಂದಿರಬೇಕು. ಟಿ.ಇ.ಟಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿದವರಿಗೆ ಆದ್ಯತೆ ನೀಡಲಾಗುತ್ತದೆ.
ಅರ್ಹ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ https://dom.karnataka.gov.in ವೆಬ್‌ಸೈಟ್ ನಲ್ಲಿ ಆನ್‌ಲೈನ್ ಮೂಲಕ 2025ರ ಅ.13 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಈ ಹಿಂದೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2025ರ ಅ.4 ರಂದು ನಿಗದಿಪಡಿಸಲಾಗಿತ್ತೆಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.