Kalaburagi | ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ : ಹೆಸರು ನೋಂದಣಿಗೆ ಜು.10ರಂದು ಕೊನೆಯ ದಿನ
ಕಲಬುರಗಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು “Exploring Nature’s Pharmacy: Potentials of Medicinal and Aromatic Plants for Health, Livelihoods, Bio-economy and Conservation” ವಿಷಯದ ಕುರಿತು 2026ರ ಜು.16 ರಿಂದ 18ರ ವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಅಕಾಡೆಮಿಯ ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಮ್ಮೇಳನದ ಕೇಂದ್ರ ವಿಷಯದ ಮೇಲೆ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದು, ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ/ಆಯುರ್ವೇದ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಭಾಗವಹಿಸಬಹುದಾಗಿದೆ.
ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧವನ್ನು (Research Paper) ಸಹ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ಸಂಶೋಧನಾ ಪ್ರಬಂಧಕ್ಕೆ ನಗದು ಬಹುಮಾನವನ್ನು ನೀಡಲಾಗುವುದು. ಆಸಕ್ತರು 2026ರ ಜು.10 ರೊಳಗಾಗಿ https://forms.gle/xn1ek2pwuBTXmNyz7 ಲಿಂಕ್ ಮೂಲಕ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ https://kstacademy.in ವೆಬ್‍ಸೈಟ್‍ನ್ನು ಅಥವಾ ಅಕಾಡೆಮಿಯ ಮೊಬೈಲ್ ಸಂಖ್ಯೆ 9620767819, 9743084194 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.