×
Ad

Kalaburagi | ಬೈಕ್‌ಗೆ ಟಿಪ್ಪರ್ ಢಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು

Update: 2026-07-15 22:18 IST

ಕಲಬುರಗಿ : ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಮಲಾಪುರ ಪಟ್ಟಣದ ಬಸ್ ನಿಲ್ದಾಣ ಸಮೀಪ ಬುಧವಾರ ನಡೆದಿದೆ.

ಮೃತರನ್ನು ಕಲಬುರಗಿ ನಗರದ ಖಮರ್ ಕಾಲೋನಿ ನಿವಾಸಿ ಮಹ್ಮದ್ ಅಹಮದ್ ಎಂದು ಗುರುತಿಸಲಾಗಿದೆ.

ಮಹ್ಮದ್ ಅಹಮದ್ ಅವರು ಕಲಬುರಗಿಯಿಂದ ಹುಮನಾಬಾದ್ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಎದುರುಗಡೆಯಿಂದ ಅತಿವೇಗವಾಗಿ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾಹಿತಿ ತಿಳಿದ ಕಮಲಾಪುರ ಸಿಪಿಐ ಶಿವಶಂಕರ ಸಾಹು ಹಾಗೂ ಪಿಎಸ್‌ಐ ಸುಖಾನಂದ ಸಿಂಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News