ಕಲಬುರಗಿ: ನಗರದ ಮದೀನಾ ಕಾಲೋನಿಯಲ್ಲಿರುವ ಕರ್ನಾಟಕ ಪಬ್ಲಿಕ್ ಹಿರಿಯ ಪ್ರಾಥಮಿಕ ಶಾಲೆಯ ಎದುರಿನ ರಸ್ತೆಯಲ್ಲಿ ಸ್ಪೀಡ್ ಬ್ರೇಕರ್ ನಿರ್ಮಿಸುವಂತೆ ಟಿಪ್ಪು ಸುಲ್ತಾನ್ ವೆಲ್‌ಫೇರ್ ಸೊಸೈಟಿ ಆಗ್ರಹಿಸಿದೆ.

ಈ ಶಾಲೆಯಲ್ಲಿ ಸುಮಾರು 400ರಿಂದ 500 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಯ ಎದುರಿನ ರಸ್ತೆಯಲ್ಲಿ ಸ್ಪೀಡ್ ಬ್ರೇಕರ್ ಇಲ್ಲದ ಕಾರಣ ವಾಹನಗಳು ಅತಿವೇಗವಾಗಿ ಸಂಚರಿಸುತ್ತಿದ್ದು, ವಿದ್ಯಾರ್ಥಿಗಳಿಗೆ ರಸ್ತೆ ದಾಟಲು ತೀವ್ರ ತೊಂದರೆಯಾಗುತ್ತಿದೆ ಎಂದು ಸೊಸೈಟಿಯ ಸದಸ್ಯರು ಶಾಲೆಯ ಮುಖ್ಯಗುರುಗಳಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಇದೇ ಶಾಲೆಯ ಎದುರು ಅತಿವೇಗವಾಗಿ ಬಂದ ಭಾರಿ ವಾಹನವೊಂದು ಸಂಚರಿಸಿದ ಪರಿಣಾಮ ಸುಮಾರು ಐವರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದ ಘಟನೆಯನ್ನೂ ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಮುಂದಿನ ದಿನಗಳಲ್ಲಿ ಮಕ್ಕಳ ಜೀವಕ್ಕೆ ಹಾನಿಯಾದರೆ ಅಥವಾ ಅಪಘಾತ ಸಂಭವಿಸಿದರೆ ಅದಕ್ಕೆ ಯಾರು ಹೊಣೆ ಎಂದು ಸೊಸೈಟಿ ಪ್ರಶ್ನಿಸಿದೆ.

ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಶಾಲೆಯ ಎದುರಿನ ರಸ್ತೆಯಲ್ಲಿ ಸ್ಪೀಡ್ ಬ್ರೇಕರ್ ಅಳವಡಿಸಿ, ವಿದ್ಯಾರ್ಥಿಗಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೊಸೈಟಿ ಒತ್ತಾಯಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ