ಕಲಬುರಗಿ | ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ : ಅರ್ಜಿ ಆಹ್ವಾನ
ಕಲಬುರಗಿ: ಈ ಹಿಂದೆ ಆಯ್ಕೆಯಾದ 13 ಅಭ್ಯರ್ಥಿಗಳ ತರಬೇತಿ ಅವಧಿಯು ದಿನಾಂಕ: 31-08-2025 ರಂದು ಮುಕ್ತಾಯವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಸಕ್ತ 2025-26ನೇ ಸಾಲಿಗೆ 13 ಖಾಲಿಯಿರುವ ಸ್ಥಾನಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಜನಾಂಗದವರಿಗೆ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಕಲಬುರಗಿ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಮಹಿಳಾ ಅಭ್ಯರ್ಥಿಗಳಿಗೆ ಶೇ. 33 ರಷ್ಟು ಮೀಸಲಾತಿ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕದಂದು ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ವಯೋಮಿತಿ 38 ವರ್ಷ ಮೀರಿರಬಾರದು. ಪ್ರವರ್ಗ-1ರಡಿ ಬರುವ ಅಭ್ಯರ್ಥಿಗಳ ವಯೋಮಿತಿ 40 ವರ್ಷಕ್ಕೆ ಮೀರಿರಬಾರದು. ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ 2025ರ ಜುಲೈ 24ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ಅಪೂರ್ಣವಾದ ಹಾಗೂ ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಹಾಗೂ ಕಚೇರಿ ಮೊಬೈಲ್ ಸಂಖ್ಯೆ 9148489157ಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಲು ಕೋರಲಾಗಿದೆ.