×
Ad

ಕಲಬುರಗಿ | ಫೆ.1ರಂದು ಸಂಕ್ರಮಣ ಕಲಾ ಸಂವಾದ : ಬಸವರಾಜ ಜಾನೆ

Update: 2026-01-30 21:43 IST

ಕಲಬುರಗಿ : ಕರ್ನಾಟಕ ಲಲಿತಕಲಾ ಅಕಾಡೆಮಿ ಬೆಂಗಳೂರು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಲಬುರಗಿ ಆಶ್ರಯದಲ್ಲಿ ನಗರದ ಕನ್ನಡ ಭವನ ಸುವರ್ಣ ಸಭಾ ಭವನದಲ್ಲಿ ಫೆ.1 ರಂದು ಬೆಳಿಗ್ಗೆ 10.30 ಗಂಟೆಗೆ ಸಂಕ್ರಮಣ ಕಲಾ ಸಂವಾದ ಏರ್ಪಡಿಸಲಾಗಿದೆ ಎಂದು ಅಕಾಡೆಮಿ ಸದಸ್ಯ ಸಂಚಾಲಕ ಬಸವರಾಜ ಜಾನೆ ತಿಳಿಸಿದ್ದಾರೆ.

ಗುಲ್ಬರ್ಗಾ ವಿವಿಯ ಸಿಂಡಿಕೇಟ್ ಸದಸ್ಯ ಎಸ್.ಪಿ.ಸುಳ್ಳದ ಉದ್ಘಾಟಿಸಲಿದ್ದು, ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪ.ಸ.ಕುಮಾರ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ದಿ ಆರ್ಟ ಇಂಟಿಗ್ರೇಷನ್ ಕಲಾ ಮಹಾವಿದ್ಯಾಲಯ ಪ್ರಾಚಾರ್ಯ ಎಂ.ಎಚ್.ಬೆಳಮಗಿ, ಪತ್ರಕರ್ತ ಸಂಗಮನಾಥ ರೇವತಗಾಂವ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಸಿಯುಕೆ ಸಂಗೀತ ಮತ್ತು ಲಲಿತಕಲಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಿವಾನಂದ ಬಂಟನೂರ ಅವರು ವಚನಗಳಲ್ಲಿ ದೃಶ್ಯಕಲೆಯ ಪರಿಕಲ್ಪನೆ ಹಾಗೂ ಬಾಗಲಕೋಟೆ ಚಿತ್ರಕಲಾಶಿಕ್ಷಕ ಲಕ್ಷ್ಮಣ ಲಕ್ಷ್ಮಣ ಬದಾಮಿ ಅವರು ಸಮಕಾಲಿನ ಕಲೆ ಮತ್ತು ಕಾವ್ಯ ವಿಷಯ ಕುರಿತು ಮಾತನಾಡಲಿದ್ದಾರೆ ಎಂದು ತಿಳಿಸಿದರು.

ಅಕಾಡೆಮಿ ರಿಜಿಸ್ಟ್ರಾರ್ ಎನ್.ನಮ್ರತ, ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಧರ್ಮಣ್ಣ ಧನ್ನಿ, ಗೌರವ ಕೋಶಾಧ್ಯಕ್ಷ ಶರಣರಾಜ ಚಪ್ಪರಬಂದಿ ಉಪಸ್ಥಿತರಿರಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಸಂವಾದ ಕಾರ್ಯಕ್ರಮ ನ‌ಂತರ ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪ.ಸ.ಕುಮಾರ ಅವರು ಕಲಾವಿದರೊಂದಿಗೆ ಕಲಾಕ್ಷೇತ್ರ ಹಾಗೂ ವಿಭಾಗ ಮಟ್ಟದ ಕಲಾಮೇಳ ಆಯೋಜಿಸುವ ಕುರಿತು ಚರ್ಚೆ ಮಾಡಲಿದ್ದಾರೆ. ನಗರದ ಸಮಸ್ತ ಕಲಾವಿದರು ಚಿತ್ರಕಲಾ ಶಿಕ್ಷಕ-ಶಿಕ್ಷಕಿಯರು, ಕಲಾಸಕ್ತರು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕಾರ್ಯಕ್ರಮದ ಸಂಚಾಲಕ ಬಸವರಾಜ ಜಾನೆ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News