ಕಲಬುರಗಿ | ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಮೃತ್ಯು
Update: 2025-06-05 19:45 IST
ಕಲಬುರಗಿ : ಕುರಿ ಕಾಯಲು ಹೋಗಿದ್ದ ಇಬ್ಬರು ಬಾಲಕರು ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನೂತನ ಮಿನಿ ವಿಧಾನಸೌಧದ ಪಕ್ಕದಲ್ಲಿ ನಡೆದಿದೆ.
ಮೃತರನ್ನು ಕುಶಾಲ್ ಚನ್ನಪ್ಪ (8), ರಾಜು ಚನ್ನಪ್ಪ (14) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿಗಳು ಭೇಟಿ ನೀಡಿ, ಮೃತದೇಹವನ್ನು ಹೊರಗಡೆ ತೆಗೆದಿದ್ದಾರೆ ಎನ್ನಲಾಗಿದೆ.
ತಹಶೀಲ್ದಾರ್ ನಾಗಯ್ಯ ಹಿರೇಮಠ, ಪಿಎಸ್‌ಐ ಶ್ರೀಶೈಲ್ ಅಂಬಾಟಿ, ವಿಜಯ ಕುಮಾರ, ಸವಿಕುಮಾರ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ