Kalaburagi | ರೈಲು ಹಳಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
ಕಲಬುರಗಿ: ಶಹಾಬಾದ್ ತಾಲೂಕಿನ ದೇವನ ತೆಗನೂರ ಗ್ರಾಮದಲ್ಲಿ ಯುವಕ ಮತ್ತು ಅಪ್ರಾಪ್ತೆ ಬಾಲಕಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಗ್ರಾಮದ ಶಿವಪ್ಪ ಸಾಬಣ್ಣ (23) ಹಾಗೂ ಅದೇ ಗ್ರಾಮದ 16 ವರ್ಷದ ಬಾಲಕಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇಬ್ಬರೂ ಬೇರೆ ಬೇರೆ ಜಾತಿಗೆ ಸೇರಿದವರಾಗಿದ್ದರಿಂದ ಕುಟುಂಬದವರು ತಮ್ಮ ಸಂಬಂಧವನ್ನು ವಿರೋಧಿಸಬಹುದು ಎಂಬ ಆತಂಕದಿಂದ ಈ ಕಠಿಣ ನಿರ್ಧಾರ ಕೈಗೊಂಡಿರುವ ಶಂಕೆ ವ್ಯಕ್ತವಾಗಿದೆ.
ಗುರುವಾರ ಬೆಳಗ್ಗೆ ಗ್ರಾಮದ ಸಮೀಪದ ರೈಲು ಹಳಿಯ ಮೇಲೆ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ವೀರಭದ್ರಪ್ಪ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.