×
Ad

ಕಲಬುರಗಿ: ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

Update: 2024-02-03 16:00 IST

ಕಲಬುರಗಿ: ಸಂಬಂಧದಲ್ಲಿ ಅಣ್ಣ- ತಂಗಿಯಾದ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಗೊಲ್ಲಾಳ್ (24) ಹಾಗೂ ಶಶಿಕಲಾ (18) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು ಎಂದು ಗುರುತಿಸಲಾಗಿದೆ. ಹಲವು ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು. ವರಸೆಯಲ್ಲಿ ಅಣ್ಣ, ತಂಗಿ ಆಗಿರುವ ಕಾರಣ ಮದುವೆಗೆ ಕುಟುಂಬಸ್ಥರಿಂದ ವಿರೋಧ ವ್ಯಕ್ತವಾಗಿತ್ತು ಎಂದು ತಿಳಿದು ಬಂದಿದೆ.

ಕೆಲವು ದಿನಗಳ ಹಿಂದೆ ಶಶಿಕಲ ಅವರ ನಿಶ್ಚಿತಾರ್ಥ ಬೇರೆಯವರೊಂದಿಗೆ ಆಗಿತ್ತು. ಮದುವೆಗೆ ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ಹೊರವಲದಲ್ಲಿ ರಾತ್ರಿ ಮದುವೆ ಮಾಡಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಯಡ್ರಾಮಿ ಪೋಲಿಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News