×
Ad

ಕಲಬುರಗಿ | ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಕಂದಾಯ ಅಧಿಕಾರಿಗಳು

Update: 2025-03-04 23:43 IST

ಡಾ.ಕಾಂತೇಶ್, ಅಖಾತರ್ ಪಟೇಲ್

ಕಲಬುರಗಿ : 30 ಸಾವಿರ ರೂ. ಲಂಚ ಸ್ವೀಕರಿಸುವಾಗ ಇಬ್ಬರು ಕಂದಾಯ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರಗಿ ತಾಲ್ಲೂಕಿನ ಉಪ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ.

ಮೇಲಕುಂದಾ (ಬಿ)ಗ್ರಾಮದ ಗ್ರಾಮಾಧಿಕಾರಿ ಡಾ.ಕಾಂತೇಶ್ ಮತ್ತು ಅಖಾತರ್ ಪಟೇಲ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಕಂದಾಯ ಅಧಿಕಾರಿಗಳು.

ಮೋಟೇಶನ್ ಮತ್ತು ಪಾಣಿ ಹೆಸರು ಸೇರ್ಪಡೆ ಮಾಡುವುದಕ್ಕೆ ಸಿದ್ದರಾಮಯ್ಯ ಎಂಬುವವರಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಪಡೆದ ಪೊಲೀಸರು, ಅಧಿಕಾರಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಕಲಬುರಗಿ ಲೋಕಾಯುಕ್ತ ಎಸ್‌.ಪಿ ಬಿಕೆ.ಉಮೇಶ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ ಸ್ಪೆಕ್ಟರ್‌ ಅಕ್ಕಮಹಾದೇವಿ ಹಾಗೂ ಸಿಬ್ಬಂದಿಗಳಾದ ಮಲ್ಲಿನಾಥ್. ರಾಣೋಜಿ, ಬಸವರಾಜ್, ಅಸ್ಲಾಂ, ಯಮನೂರಪ್ಪ, ಪೈಮೊದಿನ್, ಸೇರಿದಂತೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News