×
Ad

Kalaburagi | ಯುಪಿಎಸ್‍ಸಿ: ಮುಖ್ಯ ಪರೀಕ್ಷೆಯ ತರಬೇತಿಗಾಗಿ ಅರ್ಜಿ ಆಹ್ವಾನ

Update: 2026-07-04 19:09 IST

ಕಲಬುರಗಿ : 2026-27ನೇ ಸಾಲಿನಲ್ಲಿ ಯುಪಿಎಸ್‍ಸಿ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಯುಪಿಎಸ್‍ಸಿ ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯ ತರಬೇತಿ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

2026-27ನೇ ಸಾಲಿನಲ್ಲಿ ಯುಪಿಎಸ್‍ಸಿ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು https://forms.gle/hjnh8HwpBuTHyYmc9, https://dom.karnataka.gov.in (ಅಲ್ಪಸಂಖ್ಯಾತರ ನಿರ್ದೇಶನಾಲಯದ) ವೆಬ್‍ಸೈಟ್‍ದಲ್ಲಿ ನೇರವಾಗಿ ಆನ್‍ಲೈನ್ ಮೂಲಕ 2026ರ ಜುಲೈ 10 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕುಗಳಲ್ಲಿನ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿಗಳಾದ ಸೇಡಂ, ಆಳಂದ, ಚಿತ್ತಾಪುರ, ಜೇವರ್ಗಿ, ಅಫಜಲಪುರ, ಚಿಂಚೋಳಿ ಹಾಗೂ ಕಲಬುರಗಿ ಮಿನಿ ವಿಧಾನಸೌಧದ ನಾಲ್ಕನೇ ಮಹಡಿಯಲ್ಲಿರುವ ಜಿಲ್ಲಾ ಅಲ್ಪಸಂಖ್ಯಾgತರ ಮಾಹಿತಿ ಕೇಂದ್ರವನ್ನು, https://forms.gle/hjnh8HwpBuTHyYmc9, https://dom.karnataka.gov.in ವೆಬ್‍ಸೈಟ್‍ನ್ನು ಹಾಗೂ ರಾಜ್ಯ ಅಲ್ಪಸಂಖ್ಯಾತರ ಸಹಾಯವಾಣಿ:-8277799990(24*7) ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News