×
Ad

ಕಲಬುರಗಿ | ಎಂಎಸ್‌ಪಿ ಜಾರಿಗೆ ಆಗ್ರಹಿಸಿ ಮಾ.10 ರಂದು 'ವಿಧಾನಸೌಧ ಚಲೋ' : ಬಿ.ಭಗವಾನ್ ರೆಡ್ಡಿ

Update: 2025-03-04 21:08 IST

ಕಲಬುರಗಿ : ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿ ಕಾನೂನು ಜಾರಿಗೆ ತರಬೇಕು ಹಾಗೂ ಡಾ.ಸ್ವಾಮಿನಾಥನ್ ವರದಿ ಆಧರಿಸಿ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ವತಿಯಿಂದ ಮಾ.10 ರಂದು 'ವಿಧಾನಸೌಧ ಚಲೋ' ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ಬಿ.ಭಗವಾನ್ ರೆಡ್ಡಿ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಬಗ‌ರ್ ಹುಕುಂ' ಜಮೀನು ಅವಲಂಬಿತವಾಗಿರುವ ಸಾಕಷ್ಟು ರೈತ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಈ ರೈತರಿಗೆ ಬೇರೆ ಸಾಗುವಳಿ ಭೂಮಿ ಇಲ್ಲ. ಬಗ‌ರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಬೇಕು ಎಂದು ಆಗ್ರಹಿಸಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ (ಮನರೇಗಾ) ಗ್ರಾಮೀಣ ಕಾರ್ಮಿಕರಿಗೆ ಕೆಲಸದ ದಿನಗಳನ್ನು 200ಕ್ಕೆ ಹೆಚ್ಚಿಸಬೇಕು, ಕನಿಷ್ಠ ವೇತನವನ್ನು 600 ರೂ. ನಿಗದಿಪಡಿಸಬೇಕು, ಕೃಷಿ ಮಾರುಕಟ್ಟೆ ಹೊಸ ನೀತಿಯನ್ನು ಕೈ ಬಿಡಬೇಕು, ಬೀಜ, ರಸಗೊಬ್ಬರವನ್ನು ಕಡಿಮೆ ದರದಲ್ಲಿ ಸರಬರಾಜು ಮಾಡಬೇಕು, 2023ರ ವಿದ್ಯುತ್ ಕಾಯ್ದೆ ರದ್ದುಗೊಳಿಸಿ ಖಾಸಗೀಕರಣವನ್ನು ಹಿಂತೆಗೆದುಕೊಳ್ಳಬೇಕು, ರೈತರ ಸಾಲ ಮನ್ನಾ ಮಾಡಿ 60 ವರ್ಷ ಮೇಲ್ಪಟ್ಟ ರೈತರಿಗೆ ಪಿಂಚಣಿ ನೀಡಬೇಕು, ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಎಲ್ಲಾ ತಾಲ್ಲೂಕು ಹಾಗೂ ಜಿಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಉಚಿತ ಆರೋಗ್ಯ ಖಾತ್ರಿಪಡಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಗಣಪತಿರಾವ್ ಕೆ.ಮಾನೆ, ಮಹೇಶ್ ಎಸ್.ಬಿ., ವಿಶ್ವನಾಥ ಸಿಂಗೆ, ಭಾಗಣ್ಣ ಬುಕ್ಕಾ ಸೇರಿದಂತೆ ಇತರರು ಇದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News