×
Ad

ಕಲಬುರಗಿ | ವಿಜಯಕುಮಾರ್ ಎಸ್.ಸೋಮನೂರಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ

Update: 2025-11-01 22:39 IST

ಕಲಬುರಗಿ: ನಗರದ ಎಸ್ ಎಮ್ ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2023-2024 ನೇ ಪಶು ವೈದ್ಯಕೀಯ ಪರೀಕ್ಷಕ ವಿಜಯಕುಮಾರ್ ಎಸ್. ಸೋಮನೂರ ಅವರನ್ನು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿದರು.

ವಿಜಯಕುಮಾರ್ ಸೋಮನೂರ ಅವರು ರಾಯಚೂರು ಸೇರಿದಂತೆ ಕಲಬುರಗಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಸೇವೆ ಸಲ್ಲಿಸಿದ್ದಾರೆ. ಇವರ ಒಟ್ಟು 32 ವರ್ಷಗಳ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಯಿತು.

ಸದ್ಯ ವಿಜಯಕುಮಾರ್ ಸೋಮನಾಳ ಅವರು ಪಾಳಾದ ಪಶುಪಾಲನಾ ಆಸ್ಪತ್ರೆಯಲ್ಲಿ ಹಿರಿಯ ಪಶು ವೈದ್ಯಕೀಯ ಪರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸರ್ವೋತ್ತಮ ಪ್ರಶಸ್ತಿಗೆ ಭಾಜನರಾದ ವಿಜಯಕುಮಾರ್ ಮಾತನಾಡಿ, ನನ್ಮ ಸೇವೆ ಗುರುತಿಸಿ ನನಗೆ ಪ್ರಶಸ್ತಿ ನೀಡಿದ ಜಿಲ್ಲಾಡಳಿತ ಹಾಗೂ ಸರ್ಕಾರಿ ನೌಕರರ ಸಂಘಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News