ಕಲಬುರಗಿ | ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ : ತ್ವರಿತ ಜಾತಿ, ಆದಾಯ ಪ್ರಮಾಣಪತ್ರಕ್ಕಾಗಿ ಸಹಾಯವಾಣಿ
Update: 2025-02-14 21:38 IST
ಕಲಬುರಗಿ : ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದಾಗಿ ಜಾತಿ ಮತ್ತು ಆದಾಯ ಪ್ರಮಾಣಪತ್ರ ಪಡೆಯಲು ವಿಳಂಬವಾಗುತ್ತಿದೆ. ಆದ್ದರಿಂದ ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣಪತ್ರ ಅವಶ್ಯಕತೆಯಿದ್ದಲ್ಲಿ ವಿದ್ಯಾರ್ಥಿಗಳು/ಅಭ್ಯರ್ಥಿಗಳು ಸಹಾಯವಾಣಿ 08472-278677 ಹಾಗೂ 9986663992 ಗಳಿಗೆ ಸಂಪರ್ಕಿಸಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ತಿಳಿಸಿದ್ದಾರೆ.
ಜಾತಿ ಮತ್ತು ಆದಾಯ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮವಹಿಸಲಾಗುತ್ತಿದ್ದು, ಯಾವುದೇ ವಿದ್ಯಾರ್ಥಿಗಳು / ಅಭ್ಯರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.