×
Ad

ಕಲಬುರಗಿ | ಜಿಲ್ಲಾಡಳಿತದಿಂದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆ

Update: 2026-01-01 18:48 IST

ಕಲಬುರಗಿ: ಭಾರತ ಸೇರಿದಂತೆ ಹಾಗೂ ವಿಶ್ವದ ವಿವಿಧ ಕಡೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿಯವರ ಶಿಲ್ಪಕಲೆಗಳು ಇಂದಿಗೂ ಜೀವಂತವಾಗಿದೆ. ಶಿಲ್ಪಕಲೆಗೆ ಅವರು ನೀಡಿರುವ ಬೇಲೂರು, ಹಳೇಬಿಡು, ಸೋಮನಾಥಪುರ ದೇವಾಲಯಗಳಲ್ಲಿನ ಶಿಲ್ಪಕಲೆಗಳೆ ಸಾಕ್ಷಿ ಎಂದು ಬೀದರ್‌ ಬಿ.ವಿ.ಬಿ. ಕಾಲೇಜಿನ ಉಪನ್ಯಾಸಕ ಡಾ.ಚಿದಾನಂದ ಮೋನಪ್ಪ ಸುತಾರ ಹೇಳಿದರು.

ಗುರುವಾರದಂದು ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆ 2026ರ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆ ಅಂಗವಾಗಿ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ನಶಿಸಿಹೋಗುತ್ತಿರುವ ವಿಶ್ವಕರ್ಮದ ಕುಲಕಸುಬುಗಳನ್ನು ಮುಂದಿನ ಪೀಳಿಗೆಗೆ ಉಳಿಸಿ, ಬೆಳಸಿ ಮುಂದುವರಿಸಲು ಎಲ್ಲರೂ ಪ್ರಯತ್ನ ಮಾಡಬೇಕೆಂದು ಅವರು ಕರೆ ನೀಡಿದರು.

ಅಮರಶಿಲ್ಪಿ 12ನೇ ಶತಮಾನದಲ್ಲಿ ವಿಷ್ಣುವರ್ಧನ ಆಸ್ಥಾನದಲ್ಲಿ ಶ್ರೇಷ್ಠ ಶಿಲ್ಪಿಗಳಾಗಿದ್ದರು. ಜಗತ್ತಿನ ಅದ್ಭುತ ಶಿಲ್ಪಗಳ ಸಾಲಿನಲ್ಲಿ ಕೆತ್ತಿದ ಕಲಾಕೃತಿಗಳನ್ನು ನೋಡುವುದು ನಮ್ಮ ಸೌಭಾಗ್ಯ. ಮಾಡುವ ಕೆಲಸ ಬಗ್ಗೆ ತಿಳುವಳಿಕೆ ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆ ಇದ್ದಲ್ಲಿ ಯಶಸ್ಸು ಲಭಿಸುತ್ತದೆ ಎಂದರು.

ಸುಲೇಪೇಟ್ ವಿಶ್ವಕರ್ಮ ಏಕದಂಡಿಯ ದೊಡೇಂದ್ರ ಸ್ವಾಮೀಜಿ ಅವರು ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ನಮ್ಮ ದೇಶ ಶಿಲ್ಪಕಲೆಯ ಮೂಲಕ ಶ್ರೀಮಂತಗೊಳಿಸಬೇಕು. ವಿದೇಶಿಗರು ನಮ್ಮ ನಾಡಿನ ಶಿಲ್ಪಕಲೆಯನ್ನು ನೋಡಲು ಬೆರಗಾಗುವಂತೆ ಶಿಲ್ಪಕಲೆಯನ್ನು ನಿರೂಪಿಸಲಾಗಿದೆ ಎಂದು ಹೇಳಿದರು.

ಕಲಬುರಗಿ ಮತ್ತು ಅಫಜಲಪೂರ ಮಠದ ಮಹಾಸ್ವಾಮಿಗಳು ವಿಶ್ವಕರ್ಮ ಮೂರು ಜಾವಾದೀಶ್ವರ ಮಠದ ಪ್ರಣವ ನಿರಂಜನ ಸ್ವಾಮಿಗಳು ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಜಗದೀಶ್ವರಿ ನಾಸಿ ಅವರು ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಕರಕುಶಲ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ವೈ.ಶಿಲ್ಪಿ ಹಾಗೂ ವಿಶ್ವಕರ್ಮ ಸಮಾಜದ ಮುಖಂಡರನ್ನು ಸನ್ಮಾನಿಸಲಾಯಿತು.

ಜಿಲ್ಲಾಧಿಕಾರಿ ಕಾರ್ಯಾಲಯ ಕಚೇರಿಯ ಸಹಾಯಕರಾದ ಶಿವಪ್ರಭು ಹಿರೇಮಠ, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷರಾದ ಕಮಲಾಕರ್, ಮಹಾನಗರ ಪಾಲಿಕೆಯ ಮಾಜಿ ಸದಸ್ಯರು ಅರವಿಂದ ಪೋದ್ದಾರ, ಚಿತ್ರಲೇಖ ಟೆಂಗಳಿಕರ್, ಮೌನೇಶ್ವರ ದೇವಸ್ಥಾನದ ಅರ್ಚಕರಾದ ಶಿವರಾಜ ಶಾಸ್ತ್ರಿ, ದೇವೆಂದ್ರ ದೇಸಾಯಿ, ದೇವೆಂದ್ರಪ್ಪ ಸುತ್ತಾರ, ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News