ಸಾಂದರ್ಭಿಕ ಚಿತ್ರ

ಕಲಬುರಗಿ, ಅ. 29: 2026–27ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಬಿ.ಎಸ್ಸಿ. ನರ್ಸಿಂಗ್ ಸೀಟುಗಳ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಉಳಿದಿರುವ 8 ಸೀಟುಗಳನ್ನು ಅರ್ಹ ಅಭ್ಯರ್ಥಿಗಳಿಗೆ ವಾಕ್‌-ಇನ್‌-ಅಡ್ಮಿಷನ್‌ ಮೂಲಕ ಹಂಚಿಕೆ ಮಾಡಲಾಗುತ್ತಿದೆ. ಅಕ್ಟೋಬರ್ 30ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜೇವರ್ಗಿಯ ಸರ್ಕಾರಿ ಶುಶ್ರೂಷಾ ಮಹಾವಿದ್ಯಾಲಯದಲ್ಲಿ ಪ್ರವೇಶ ಪ್ರಕ್ರಿಯೆ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದುವರೆಗೆ ಸಿಇಟಿ ಮೂಲಕ ಯಾವುದೇ ಸೀಟು ಹಂಚಿಕೆಯಾಗದಿರುವ ಅರ್ಹ ಅಭ್ಯರ್ಥಿಗಳಿಗೆ ಸಿಇಟಿ ಮೆರಿಟ್ ಸಂಖ್ಯೆಯ ಆಧಾರದ ಮೇಲೆ ಸೀಟು ಹಂಚಿಕೆ ಮಾಡಿ ಪ್ರವೇಶ ನೀಡಲಾಗುತ್ತದೆ.

ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 30ರಂದು ನಡೆಯುವ ವಾಕ್‌-ಇನ್‌ ಪ್ರವೇಶ ಪ್ರಕ್ರಿಯೆಗೆ ತಮ್ಮ ಮೂಲ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರಾಂಶುಪಾಲರು ಕೋರಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜೇವರ್ಗಿ ಸರ್ಕಾರಿ ಶುಶ್ರೂಷಾ ಮಹಾವಿದ್ಯಾಲಯವನ್ನು ಅಥವಾ ಸಹಾಯವಾಣಿ ಸಂಖ್ಯೆ 9482666617 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor