×
Ad

ಕಲಬುರಗಿ | ಜು.10 ರಿಂದ 13 ರವರೆಗೆ ಮೂರು ದಿನಗಳ ಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯ

Update: 2025-07-08 19:53 IST

ಸಾಂದರ್ಭಿಕ ಚಿತ್ರ

ಕಲಬುರಗಿ: ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಸರಡಗಿ ಭೀಮಾ ನದಿಯಿಂದ ನೀರು ಸರಬರಾಜಾಗುವ ಮುಖ್ಯ ಕೊಳವೆ ಮಾರ್ಗ ಸರಡಗಿಯಿಂದ ಕೊಟನೂರ ನೀರು ಶುದ್ಧೀಕರಣ ಘಟಕದ ಮಧ್ಯದಲ್ಲಿ ಇರುವ ಪೈಪ್ ಹಾಗೂ ಮ್ಯಾನಿಫೋಲ್ಡ್ ಗಳ ತುರ್ತು ದುರಸ್ತಿ ಕಾರ್ಯಕೈಗೊಂಡಿರುವ ಹಿನ್ನೆಲೆಯಲ್ಲಿ ಕೊಟನೂರ ಹಾಗೂ ಶೋರಗುಂಬಜ್ ನೀರು ಶುದ್ಧೀಕರಣ ಘಟಕದ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಜು.10 ರಿಂದ 13 ರವರೆಗೆ 3 ದಿನಗಳ ಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ನಗರದ ಸಾರ್ವಜನಿಕರು ಮಹಾನಗರ ಪಾಲಿಕೆ, ಕೆಯುಐಡಿಎಫ್‍ಸಿ ಹಾಗೂ ಮೆಎಲ್ ಆಂಡ್ ಟಿ ಕಂಪನಿಯೊಂದಿಗೆ ಸಹಕರಿಸಬೇಕೆಂದು ಕಲಬುರಗಿ ಕೆಯುಡಬ್ಲ್ಯೂಎಸ್‍ಎಂಪಿ-ಕೆಯುಐಡಿಎಫ್‍ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

ಕಲಬುರಗಿ ನಗರದ ಬಿದ್ದಾಪೂರ, ರಾಯರಗುಡ್ಡಿ, ವಿಶಾಲ ನಗರ, ಅಂಭಿಕಾ ನಗರ, ಪಿಂಪ್ಲಿ ಟೆಂಪಲ್, ಪಿ ಆಂಡ್ ಟಿ ಕಾಲೋನಿ, ವಿದ್ಯಾನಗರ, ಯಶವಂತ ನಗರ, ಕರುಣೇಶ್ವರ ನಗರ, ಗಣೇಶ ನಗರ, ಭಾಗ್ಯವಂತಿ ನಗರ, ದೇವಾ ನಗರ, ತಿಲಕ್ಕ ನಗರ, ಬನಶಂಕರಿ ನಗರ, ಹರಿ ನಗರ, ಗಾಭರೆ ಲೇಔಟ್, ಜೇಮ್‍ಶೇಟಿ ನಗರ, ಕೃಷ್ಣ ನಗರ, ತಾರಫೈಲ್, ಉದಯ ನಗರ, ಎನ್‍ಜಿಓ ಕಾಲೋನಿ, ಜೇವರ್ಗಿ ಕಾಲೋನಿ, ಮಾಕಾ ಲೇಔಟ್, ಸಂತೋಷ ಕಾಲೋನಿ, ಪಿಡಬ್ಲ್ಯೂಡಿ ಕಾಲೋನಿ, ಬ್ಯಾಂಕ್ ಕಾಲೋನಿ, ಬಾಲಾಜಿ ನಗರ, ರಹೆಮತ್ ನಗರ, ಸಂಪಿಕೆ ನಗರ, ಬುದ್ಧ ನಗರ, ರೇವಣಸಿದ್ದೇಶ್ವರ ಕಾಲೋನಿ, ಸಾಯಿ ನಗರ, ಓಜಾ ಲೇಔಟ್, ಸ್ವಾಮಿ ವಿವೇಕಾನಂದ ನಗರ, ಪ್ರಗತಿ ಕಾಲೋನಿ ಹಾಗೂ ಸಿಐಬಿ ಕಾಲೋನಿ.

ಶಕ್ತಿನಗರ, ಸ್ಟೇಷನ್ ಬಝಾರ್‌, ಐವಾನ್ ಶಾಹಿ, ಎತೀಮಖಾನಾ, ಶಾಂತಿ ನಗರ, ವಿಠ್ಠಲ ನಗರ, ಖುಬಾ ಪ್ಲಾಟ್, ಮಿಸಬಾ ನಗರ, ಅಜ್ಮರ್ ಕಾಲೋನಿ, ಕರಿಮ ನಗರ, ಗಾಲಿಫ್ ಕಾಲೋನಿ, ಮಹಮ್ಮದ ಚೌಕ್, ಖಾದಿಲ್ ಚೌಕ್, ಶಿವನಗರ, ಸಿದ್ಧರಾಮೇಶ್ವರ ಕಾಲೋನಿ, ನಬಿ ಕಾಲೋನಿ, ಶೇಖ ರೋಜಾ, ಕೈಲಾಸ ನಗರ, ಜಿಆರ್ ನಗರ, ಕಸ್ತೂರಿ ನಗರ, ಆಶರ್ಯ ಕಾಲೋನಿ, ಪೂಜಾ ಕಾಲೋನಿ, ಜಾಗೃತಿ ಕಾಲೋನಿ, ಓಂ ನಗರ, ಜಮ್‍ಜಮ್ ಕಾಲೋನಿ, ಜುಬೇರ್ ಕಾಲೋನಿ, ಅಜಾದಪೂರ ಕಾಲೋನಿ, ನಾಯ್ಡು ಕಾಲೋನಿ ಹಾಗೂ ಮಿನಿ ಅಮ್ಮಲವಾಡಿ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News