ಕಲಬುರಗಿ | ಅಲ್ಪಸಂಖ್ಯಾತ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಿ 4% ಮುಸ್ಲಿಂ ಮೀಸಲಾತಿಯನ್ನು ಮರುಸ್ಥಾಪಿಸಬೇಕು : ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ
ಕಲಬುರಗಿ: ಅಲ್ಪಸಂಖ್ಯಾತ ಹಾಗೂ ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಿ, 4% ಮುಸ್ಲಿಂ ಮೀಸಲಾತಿಯನ್ನು ಮರುಸ್ಥಾಪಿಸಬೇಕೆಂದು ಒತ್ತಾಯಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ- 2021 ಅನ್ನು ತಕ್ಷಣವೇ ರದ್ದುಪಡಿಸಬೇಕು. ಕರ್ನಾಟಕ ಧರ್ಮ ಸ್ವಾತಂತ್ರ ಸಂರಕ್ಷಣಾ ಕಾಯ್ದೆ-2021 ಅನ್ನು ರದ್ದುಪಡಿಸಬೇಕು. ರದ್ದುಪಡಿಸಲಾದ 4% ಮುಸ್ಲಿಂ ಮೀಸಲಾತಿಯನ್ನು ತಕ್ಷಣವೇ ಮರುಸ್ಥಾಪಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಮುಖಂಡರು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ರೈತರಿಗೆ, ಅಲ್ಪಸಂಖ್ಯಾತರಿಗೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಲ್ಲಿ ನಂಬಿಕೆ ಇಟ್ಟಿರುವ ಎಲ್ಲಾ ನಾಗರಿಕರಿಗೆ ನ್ಯಾಯ ಒದಗಿಸಬೇಕು. 2023ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಒಂದು ವರ್ಷದ ಒಳಗೆ ಇಂತಹ ಕರಾಳ ಮತ್ತು ಜನವಿರೋಧಿ ಕಾನೂನುಗಳನ್ನು ಹಿಂದಕ್ಕೆ ಪಡೆಯುವ ಬಗ್ಗೆ ಸ್ಪಷ್ಟವಾದ ಆಶ್ವಾಸನೆಯನ್ನು ನೀಡಿತ್ತು. ಆದರೆ ಸರಕಾರ ಬಂದು ಎರಡೂವರೆ ವರ್ಷ ಕಳೆದರೂ ಜನವಿರೋಧಿ ಕಾಯ್ದೆಗಳನ್ನು ಹಿಂಪಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸಲೀಂ ಅಹ್ಮದ್ ಚಿತ್ತಾಪುರಿ, ರಾಜ್ಯ ಕಾರ್ಯದರ್ಶಿ ಮುಬೀನ್ ಅಹ್ಮದ್, ಪ್ರಧಾನ ಕಾರ್ಯದರ್ಶಿ ಅಫ್ಜಾಲ್ ಮಹಮೂದ್, ಹೈದರ್ ಅಲಿ ಬಗ್ಬಾನ್, ಅಡ್ವೊಕೇಟ್ ಅಬ್ದುಲ್ ಜಬ್ಬಾರ್ ಗೋಲಾ , ಅಫ್ಜಲ್ ಮೆಹಮೂದ್ ಸಲೀಮ್ ಸಗರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.