×
Ad

ಕಲಬುರಗಿ | ನಾಳೆ ಮಹಿಳಾ ಚಿತ್ರಕಲಾ ಪ್ರದರ್ಶನ : ವಿಜಯಕುಮಾರ ತೇಗಲತಿಪ್ಪಿ

Update: 2024-11-28 21:37 IST

ಕಲಬುರಗಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಾಳೆ (ಶುಕ್ರವಾರ) ಬೆಳಗ್ಗೆ10.30 ಕ್ಕ ನಗರದ ಕನ್ನಡ ಭವನದಲ್ಲಿರುವ ಕಲಾ ಸೌಧದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಚಿತ್ರಕಲಾ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಪ್ರತಿಯೊಬ್ಬರಲ್ಲಿ ಯಾವುದಾದರೊಂದು ಪ್ರತಿಭೆ ಅಡಗಿರುತ್ತದೆ. ಬದುಕನ್ನು ರೂಪಿಸುವಂಥ ಕಲೆ, ಸಾಹಿತ್ಯ, ಚಿತ್ರಕಲೆ, ನೃತ್ಯ ಸೇರಿದಂತೆ ಹಲವು ಬಗೆಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕಾರ್ಯವನ್ನು ಇಂಥ ಅಪರೂಪದ ಕಾರ್ಯಕ್ರಮದ ಮೂಲಕ ಪರಿಷತ್ತು ಮಾಡುತ್ತಿದೆ ಎಂದು ಅವರು ತಿಳಿಸಿದರು.

ಉದ್ಘಾಟರಾಗಿ ಎ.ಎಸ್.ಐ. ಆಸ್ಪತ್ರೆಯ ಡಾ.ಆಯ್ ಅಮೃತಾ ಸ್ವಾತಿ ಅವರು ಆಗಮಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಲೇಖಕಿ ಡಾ.ಪರಿಮಳಾ ಅಂಬೇಕರ್, ಕಲಾ ಸೌಧ ಸಂಚಾಲಕ ಡಾ.ರೆಹಮಾನ್ ಪಟೇಲ್, ಜಿಲ್ಲಾ ಕಸಾಪದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ ಉಪಸ್ಥಿತರಿರುವರು ಎಂದು ಹೇಳಿದರು.

ಮಂಡ್ಯದಲ್ಲಿ ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಸಮ್ಮೇಳನಾಧ್ಯಕ್ಷ ಡಾ. ಗೊ.ರು.ಚನ್ನಬಸಪ್ಪ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸುವರು ಎಂದು ಮಾಹಿತಿ ನೀಡಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News