Kalaburagi | ಆ.16ರಂದು ಕಾವ್ಯ ಮಹಿಳಾ ಸಮ್ಮೇಳನ: ಸಮ್ಮೇಳನಾಧ್ಯಕ್ಷರಾಗಿ ಶಕುಂತಲಾ ಪಾಟೀಲ ಆಯ್ಕೆ
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ, ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಆಗಸ್ಟ್ 16ರಂದು ನಗರದ ಕನ್ನಡ ಭವನದಲ್ಲಿ ಆಯೋಜಿಸಿರುವ ಒಂದು ದಿನದ ಕಲಬುರಗಿ ಜಿಲ್ಲಾ ಪ್ರಥಮ ಮಹಿಳಾ ಕಾವ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಕವಯಿತ್ರಿ ಹಾಗೂ ಲೇಖಕಿ ಶಕುಂತಲಾ ಪಾಟೀಲ ಜಾವಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ತಿಳಿಸಿದ್ದಾರೆ.
ಮಹಿಳೆಯರಲ್ಲಿರುವ ಸೃಜನಶೀಲತೆ, ಆಂತರಿಕ ಜಾಗೃತಿ ಹಾಗೂ ಬದುಕಿನ ಸವಾಲುಗಳನ್ನು ಎದುರಿಸುವ ಛಲವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಂತಹ ಸಮ್ಮೇಳನಗಳು ಮಹತ್ವದ್ದಾಗಿವೆ. ಮಹಿಳೆಯರ ಅಂತರಾಳದಿಂದ ಹೊರಹೊಮ್ಮುವ ಸಾಹಿತ್ಯಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಇನ್ನಷ್ಟು ಉತ್ತೇಜನ ನೀಡಿ ಬೆಳೆಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸಮ್ಮೇಳನಾಧ್ಯಕ್ಷೆಯ ಪರಿಚಯ :
ಶಕುಂತಲಾ ಪಾಟೀಲ ಜಾವಳಿ ಅವರು ಆಳಂದ ತಾಲೂಕಿನ ಜಾವಳಿ (ಡಿ) ಗ್ರಾಮದವರಾಗಿದ್ದು, ‘ಜೀವಯಾನ’ ಕವನ ಸಂಕಲನದ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ. ಬಳಿಕ ‘ಜೀವನಯಾನ’, ‘ಬೆಳಕು ಮೂಡಿದಾಗ’, ‘ಆಧುನಿಕ ವಚನಗಳು’, ‘ಬೆಳಕು ತುಂಬಿದ ಭಾವ ಅನುಭವಾಮೃತ’, ‘ಗ್ರಾಮೀಣ ಬದುಕಿನ ಬುತ್ತಿ’ ಸೇರಿದಂತೆ ಹಲವು ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯ ಲೋಕಕ್ಕೆ ಗಮನಾರ್ಹ ಕೊಡುಗೆ ನೀಡಿದ್ದಾರೆ.
ಸಭೆಯಲ್ಲಿ ಜಿಲ್ಲಾ ಕಸಾಪ ದ ಶಿವರಾಜ ಅಂಡಗಿ, ಧರ್ಮಣ್ಣ ಎಚ್.ಧನ್ನಿ, ಶರಣರಾಜ ಛಪ್ಪರಬಂದಿ, ಜಯಶ್ರೀ ಜಮಾದಾರ, ಶಿವಲೀಲಾ ಕಲಗುರ್ಕಿ, ಮಹಿಳಾ ನೌಕರರ ಸಂಘದ ರೇಣುಕಾ ಡಾಂಗೆ, ನಂದಿನಿ ಸನಬಾಳ. ರಾಜೇಂದ್ರ ಮಾಡಬೂಳ, ಗಣೇಶ ಚಿನ್ನಾಕಾರ, ಬಾಬುರಾವ ಪಾಟೀಲ, ಧರ್ಮರಾಜ ಜವಳಿ, ಸೋಮಶೇಖರಯ್ಯ ಹೊಸಮಠ, ಸೈಯ್ಯದ್ ನಜಿರುದ್ದಿನ್ ಮುತ್ತವಲ್ಲಿ, ರಮೇಶ ಡಿ ಬಡಿಗೇರ, ರಾಜಶೇಖರ ಚೌದ್ರಿ ಸೇರಿದಂತೆ ಅನೇಕರು ಸಭೆಯಲ್ಲಿ ಭಾಗವಹಿಸಿದ್ದರು.