×
Ad

ಕಲಬುರಗಿ | ಯೋಗವು ದೈಹಿಕ, ಮಾನಸಿಕ ಆರೋಗ್ಯಕ್ಕೆ ಪ್ರಯೋಜನಕಾರಿ : ಡಾ.ಕಿರಣ ದೇಶಮುಖ್

Update: 2025-06-20 20:37 IST

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ವತಿಯಿಂದ ಶುಕ್ರವಾರದಂದು, ಅಂತರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ಯ "ಯೋಗ ಮ್ಯಾರಥಾನ್" ಕಾರ್ಯಕ್ರಮವನ್ನು ಶರಣಬಸವ ವಿಶ್ವವಿದ್ಯಾಲಯದ ಆವರಣದಲ್ಲಿರುವ ಆಟದ ಮೈದಾನದಲ್ಲಿ ಏರ್ಪಡಿಸಲಾಯಿತು.

ಈ ಕಾರ್ಯಕ್ರಮವನ್ನು ಡಾ.ಕಿರಣ್ ದೇಶಮುಖ್ ಸಸಿಗೆ ನೀರೆರೆವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಡಾ. ಶಿಲ್ಪಾ ಮಾಲಿಪಾಟೀಲ್, ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಅನಿಲ ಕುಮಾರ್ ಬಿಡವೆ, ಕುಲಸಚಿವ ಡಾ.ಎಸ್.ಜಿ.ಡೊಳ್ಳೇಗೌಡರ್, ಕುಲಸಚಿವ (ಮೌಲ್ಯಮಾಪನ) ಡಾ.ಎಸ್.ಎಚ್.ಹೊನ್ನಳ್ಳಿ, ಡೀನ್ ಡಾ.ಲಕ್ಷ್ಮೀ ಪಾಟೀಲ್ ಮಾಕಾ, ಹಣಕಾಸು ಅಧಿಕಾರಿ ಡಾ.ಕಿರಣ್ ಮಾಕಾ ಸೇರಿದಂತೆ ವಿವಿಧ ವಿಭಾಗಗಳ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಉದ್ಘಾಟಿಸಿ ಮಾತನಾಡಿದ ಡಾ.ಕಿರಣ್ ದೇಶಮುಖ್, ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿಯಾಗಿದೆ. ಇದು ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನಿಯಮಿತವಾಗಿ ಯೋಗಾಭ್ಯಾಸ ಮಾಡುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ಮನಸ್ಸು ಶಾಂತವಾಗಿರುತ್ತದೆ. ಯೋಗವು ಸ್ನಾಯುಗಳನ್ನು ಬಲಪಡಿಸುತ್ತದೆ, ಕೀಲುಗಳ ಚಲನಶೀಲತೆಯನ್ನು ಹೆಚ್ಚಿಸುತ್ತದೆ ಮತ್ತು ದೇಹದ ಸಮತೋಲನವನ್ನು ಸುಧಾರಿಸುತ್ತದೆ. ಬೆನ್ನು ನೋವು, ಕುತ್ತಿಗೆ ನೋವು ಮತ್ತು ಇತರ ದೈಹಿಕ ಸಮಸ್ಯೆಗಳನ್ನು ಕಡಿಮೆ ಮಾಡಲು ಯೋಗವು ತುಂಬಾ ಸಹಕಾರಿಯಾಗಿದೆ ಎಂದರು.

ನಂತರ ಎಲ್ಲರೂ ಯೋಗ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡು ಶರಣಬಸವ ವಿಶ್ವವಿದ್ಯಾಲಯದಿಂದ, ಆನಂದ್ ಹೋಟೆಲ್ ಮಾರ್ಗವಾಗಿ ಹೊರಟು ಶರಣಬಸವೇಶ್ವರ ದೇವಾಲಯದಲ್ಲಿ ಸಂಪನ್ನಗೊಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News