ಕಲಬುರಗಿ | ನೇಣು ಬಿಗಿದು ಯುವಕ ಆತ್ಮಹತ್ಯೆ
Update: 2026-01-29 16:21 IST
ಕಲಬುರಗಿ : ನಗರದ ಕೆ.ಎಚ್.ಬಿ ಕಾಲೋನಿಯಲ್ಲಿ ಮನನೊಂದ ಯುವಕನೋರ್ವ ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಮಧ್ಯರಾತ್ರಿ ನಡೆದಿದೆ.
ಮೃತನನ್ನು ಕೆ.ಎಚ್.ಬಿ ಕಾಲೋನಿಯ ನಿವಾಸಿ ಯಾಸೀನ್ (22) ಎಂದು ಗುರುತಿಸಲಾಗಿದೆ.
ಯಾಸೀನ್ ಗೌಂಡಿ ಕೆಲಸ ಮಾಡಿಕೊಂಡಿದ್ದು, ಮದ್ಯಪಾನ ಚಟಕ್ಕೆ ಒಳಗಾಗಿದ್ದನು ಎಂದು ತಿಳಿದುಬಂದಿದೆ. ಈ ಬಗ್ಗೆ ಕುಟುಂಬಸ್ಥರು ಬುದ್ಧಿವಾದ ಹೇಳಿದರು ಯಾರ ಮಾತನ್ನು ಕೇಳುತ್ತಿರಲಿಲ್ಲ ಎನ್ನಲಾಗಿದೆ.
ಯಾವುದೋ ಕಾರಣಕ್ಕೆ ಮಾನಸಿಕವಾಗಿ ನೊಂದ ಯಾಸೀನ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಶಂಕಿಸಲಾಗಿದೆ.
ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.