ಕಲಬುರಗಿ: ಹರಿತ ಆಯುಧದಿಂದ ಯುವಕನ ಕೊಲೆ
Update: 2026-06-01 23:22 IST
ಕಲಬುರಗಿ: ವಲಸೆ ಕುರಿಗಾಹಿಯೊಬ್ಬರನ್ನು ಹತ್ಯೆ ಮಾಡಿರುವ ಘಟನೆ ತಾಲೂಕಿನ ಜಂಬಗಾ (ಬಿ) ಗ್ರಾಮದ ಸಮೀಪ ನಡೆದಿದೆ.
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ ನಿವಾಸಿ ಬಂಡು ತಾಂಬೆ (24) ಕೊಲೆಯಾದ ಯುವಕ. ಹರಿತವಾದ ಆಯುಧದಿಂದ ಹೊಟ್ಟೆ ಭಾಗಕ್ಕೆ ಚುಚ್ಚಿ ಹತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ., ಸಬರ್ಬನ್ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ನಟರಾಜ ಲಾಡೆ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.