×
Ad

ಕಲಬುರಗಿ | ಮಣ್ಣೂರಿನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಹತ್ಯೆ

Update: 2024-05-12 14:06 IST

ಕಲಬುರಗಿ, ಮೇ 12: ಯುವಕನೊಬ್ಬನಿಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಮಣ್ಣೂರ್ ಗ್ರಾಮದ ಹೊರವಲಯದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಮಣ್ಣೂರ್ ಗ್ರಾಮದ ನಿವಾಸಿ ರಂಜಾನ್ ಮಹೆಬೂಬ್ ತಾರಾ (24) ಕೊಲೆಯಾದ ಯುವಕ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ.

ರಂಜಾನ್ ಮಹೆಬೂಬ್ ಶನಿವಾರ ಮಧ್ಯಾಹ್ನ ಜಮೀನಿಗೆ ತನ್ನ ತಂದೆಯನ್ನು ದ್ವಿಚಕ್ರ ವಾಹನದಲ್ಲಿ ಬಿಟ್ಟು ಮರಳಿ ಬರುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದೆ.

ಕಲಬುರ್ಗಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ, ಸಿಪಿಐ ಚನ್ನಯ್ಯ ಹಿರೇಮಠ್, ಪಿಎಸ್ಐ ಮಹೆಬೂಬ್ ಅಲಿ ಶ್ವಾನದಳ, ಬೆರಳಚ್ಚು ತಜ್ಞರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಂತಕರು ಕೊಲೆಗೆ ಬಳಸಿದ ಮಾರಕಾಸ್ತ್ರ ಕೊಲೆಯಾದ ಸ್ಥಳದ ಸಮೀಪವೇ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News