×
Ad

ಕಲಬುರಗಿ ಪ್ರಾದೇಶಿಕ ಆಯುಕ್ತರಾಗಿ ಝೆಹೆರಾ ನಸೀಮ್, ಕೆಕೆಆರ್ಟಿಸಿ ಎಂಡಿಯಾಗಿ ಡಾ.ಸುಶೀಲಾ ಬಿ. ವರ್ಗಾವಣೆ

Update: 2025-07-08 21:34 IST

ಡಾ.ಸುಶೀಲಾ ಬಿ.

ಕಲಬುರಗಿ/ ಬೆಂಗಳೂರು: ಕಲಬುರಗಿ ಕಂದಾಯ ವಿಭಾಗದ ವ್ಯಾಪ್ತಿಯ ಪ್ರಾದೇಶಿಕ ಆಯುಕ್ತರಾಗಿ 2013ರ ಐಎಎಸ್ ಅಧಿಕಾರಿಯಾಗಿರುವ ಝೆಹೆರಾ ನಸೀಮ್ ಅವರು ನಿಯುಕ್ತಿಗೊಂಡಿದ್ದಾರೆ.

ರಾಜ್ಯ ಸರಕಾರವು ಮಂಗಳವಾರ ಹೊರಡಿಸಿದ್ದ ಅಧಿಸೂಚನೆಯಲ್ಲಿ ರಾಜ್ಯ ರೇಶ್ಮೆ ಕೈಗಾರಿಕೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಝೆಹೆರಾ ನಸೀಮ್ ಅವರನ್ನು ಕಲಬುರಗಿ ಪ್ರಾದೇಶಿಕ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಅಲ್ಲದೆ, ಯಾದಗಿರಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಸುಶೀಲಾ ಬಿ. ಅವರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ(ಕೆಕೆ ಆರ್ಟಿಸಿ) ವ್ಯವಸ್ಥಾಪಕ ನಿರ್ದೇಶಕಿಯ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News