ಕಲಬುರಗಿ: ಮಹಾರಾಷ್ಟ್ರದ ಪುಣೆಯಲ್ಲಿ ಅಕ್ಟೋಬರ್ 27ರಿಂದ ನವೆಂಬರ್ 3ರವರೆಗೆ ನಡೆಯಲಿರುವ 41ನೇ ರಾಷ್ಟ್ರೀಯ ಯುವ ಬಾಸ್ಕೆಟ್‌ಬಾಲ್ ಪಂದ್ಯಾವಳಿಗೆ ಕಲಬುರಗಿ ಜಿಲ್ಲೆಯ ಯುವ ಕ್ರೀಡಾಪಟು ಶಶಿಕಾಂತ್ ಅವರು ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕಲಬುರಗಿ ಜಿಲ್ಲಾ ಬಾಸ್ಕೆಟ್‌ಬಾಲ್ ಸಂಸ್ಥೆಯ ಮೂಲಕ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿರುವ ಶಶಿಕಾಂತ್ ಅವರು, ಕಲಬುರಗಿಯ ಅಕ್ಕಮಹಾದೇವಿ ಬಾಸ್ಕೆಟ್‌ಬಾಲ್ ಕ್ಲಬ್ ಪರವಾಗಿ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದಾರೆ. 

ಪುಣೆಯಲ್ಲಿ ನಡೆಯಲಿರುವ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಶಶಿಕಾಂತ್ ಅವರು ಉತ್ತಮ ಪ್ರದರ್ಶನ ನೀಡಿ, ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾರತವನ್ನು ಪ್ರತಿನಿಧಿಸುವಂತಾಗಲಿ ಎಂದು ಕಲಬುರಗಿ ಜಿಲ್ಲಾ ಬಾಸ್ಕೆಟ್‌ಬಾಲ್ ಸಂಸ್ಥೆಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಉದ್ನೂರ್, ಕಾರ್ಯದರ್ಶಿ ಡಾ. ಚಂದ್ರಕಾಂತ್ ಶಿರೋಳಿ, ಅಕ್ಕಮಹಾದೇವಿ ಬಾಸ್ಕೆಟ್‌ಬಾಲ್ ಕ್ಲಬ್ ಅಧ್ಯಕ್ಷ ರಾಮೇಶ್ವರ ಭಾಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬಾಸ್ಕೆಟ್‌ಬಾಲ್ ತರಬೇತುದಾರ ಪ್ರವೀಣ್ ಕುಮಾರ್ ಪುಣೆ ಸೇರಿದಂತೆ ಕ್ರೀಡಾ ಕ್ಷೇತ್ರದ ಗಣ್ಯರು ಶುಭ ಹಾರೈಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor