×
Ad

ಕಲಬುರಗಿ | ಗಣೇಶ ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸಿದ ಪಿಎಸ್‍ಐ : ವಿಡಿಯೋ ವೈರಲ್

Update: 2024-09-25 14:54 IST

ಕಲಬುರಗಿ : ಪಿಎಸ್‍ಐ ಒಬ್ಬರು ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿರುವ ಘಟನೆ ಜೇವರ್ಗಿ ತಾಲ್ಲೂಕಿನ ಜೇರಟಗಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಗಣೇಶ ವಿಸರ್ಜನೆ ಮೆರವಣಿಗೆ ಶಾಂತಿಯುತವಾಗಿ ನಡೆಸಲು ತಾಲ್ಲೂಕು ಹಾಗೂ ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಪ್ರಚೋದನಕಾರಿ ಭಾಷಣಕ್ಕೆ ಅವಕಾಶ ಕೊಡದಂತೆ ನಿರ್ಬಂಧ ವಿಧಿಸಲಾಗಿತ್ತು. ಈ ಎಲ್ಲಾ ನಿಬಂಧನೆಗಳ ಮಧ್ಯೆಯೂ ಪಿಎಸ್‍ಐ ಒಬ್ಬರು ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಪಿಎಸ್‍ಐ ಅವರನ್ನು ನೆಲೋಗಿ ಪೋಲಿಸ್ ಠಾಣೆಯ ಚಿದಾನಂದ್ ಸವದಿ ಎಂದು ಗುರುತಿಸಲಾಗಿದೆ. ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಪೋಲಿಸ್ ಸಮವಸ್ತ್ರದಲ್ಲಿಯೇ ಕುಣಿದು ಕುಪ್ಪಳಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಮೆರವಣಿಗೆಯಲ್ಲಿ ಯಾವುದೇ ರೀತಿಯಲ್ಲಿ ತೊಂದರೆ, ಸಮಸ್ಯೆ ಆಗಬಾರದು ಎಂದು ಬಿಗಿ ಪೋಲಿಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ಪೋಲಿಸ್ ಅಧಿಕಾರಿ ಪಿಎಸ್‍ಐ ಚಿದಾನಂದ್ ಸವದಿ ಅವರು ಗಣೇಶ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿರುವ ದೃಶ್ಯಾವಳಿಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್‍ಗಳಲ್ಲಿ ಸೆರೆಹಿಡಿದ್ದಾರೆ.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News