×
Ad

ಕಾಳಗಿ: ರಸಗೊಬ್ಬರ ಬೆಲೆ ಹೆಚ್ಚಳ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

Update: 2026-05-30 20:40 IST

ಕಾಳಗಿ: ರಸಗೊಬ್ಬರ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ, ವಿದ್ಯುತ್ ಖಾಸಗೀಕರಣ ಹಿಂಪಡೆಯಲು ಒತ್ತಾಯಿಸಿ ಪಟ್ಟಣದ ತಹಶಿಲ್ದಾರರ ಕಚೇರಿ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು.

ರೈತರು ತಮಗೆ ಅಗತ್ಯವಾದ ರಸಗೊಬ್ಬರವನ್ನು ಕೇಳಿದಾಗ ವ್ಯಾಪಾರಿಗಳು ಆ ಗೊಬ್ಬರವನ್ನು ನೀಡಬೇಕು. ಆದರೆ ಅದಕ್ಕೆ ಬದಲಾಗಿ ಬೇರೆ ಗೊಬ್ಬರ ನೀಡುತ್ತಿದ್ದಾರೆ. ಜೊತೆಗೆ ಕೀಟನಾಶಕಗಳನ್ನು ಒತ್ತಾಯ ಮಾಡಿ ನೀಡುತ್ತಿದ್ದಾರೆ. ಇದು ನಿಲ್ಲಬೇಕು. ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ರಿಯಾಯಿತಿ ದರದಲ್ಲಿ ಪರಿಕರಗಳನ್ನು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿ ಕಾಳ ಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು. ಕೇರಳ ಮಾದರಿಯಲ್ಲಿ ಋಣಮುಕ್ತ ಕಾಯ್ದೆ ಜಾರಿಗೊಳಿಸಬೇಕು, ರೈತರು ಬೆಳೆಗಳಿಗೆ ನೀರುಣಿಸಲು ಪಂಪಸೆಟ್ ಗಳಿಗೆ ಸರಿಯಾದ ಸಮಯಕ್ಕೆ ವಿದ್ಯುತ್ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ರೈತರು ದೇಶದ ಬೆನ್ನೆಲುಬು ಎಂದು ರಾಜಕೀಯ ಪಕ್ಷಗಳು ಮತ್ತು ನಾಯಕರು ಚುನಾವಣೆ ಪ್ರಚಾರದಲ್ಲಿ ಹೇಳುವರು. ಆದರೆ ಚುನಾವಣೆ ನಂತರ ರೈತರನ್ನು ನಿರ್ಲಕ್ಷಿಸುವರು ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ನಂತರ ತಹಸೀಲ್ದಾರ್ ಪೃಥ್ವಿರಾಜ್‌ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶರಣಬಸಪ್ಪ ಮಮಶೆಟ್ಟಿ, ಪರಮೇಶ್ವರ ಕಾಂತ, ದಿಲೀಪ್ ನಾಗೂರೆ, ಸಿದ್ದಪ್ಪ ಕಲಶೆಟ್ಟಿ ಸೇರಿದಂತೆ ಅನೇಕರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News