×
Ad

ಕಾಳಗಿ| ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಹತ್ಯೆ

Update: 2026-02-02 16:31 IST

ಸಾಂದರ್ಭಿಕ ಚಿತ್ರ

ಕಾಳಗಿ : ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ರವಿವಾರ ತಡರಾತ್ರಿ ನಡೆದಿದೆ.

ಹತ್ಯೆಯಾದ ವ್ಯಕ್ತಿಯನ್ನು ಕೋಡ್ಲಿ ಗ್ರಾಮದ ನಿವಾಸಿ ಶಂಕರ ನರನಾಳ (33) ಎಂದು ಗುರುತಿಸಲಾಗಿದೆ.

ರವಿವಾರ ರಾತ್ರಿ ಕೋಡ್ಲಿ ಗ್ರಾಮದ ಮೂವರು ವ್ಯಕ್ತಿಗಳು ಬೈಕ್‌ನಲ್ಲಿ ಸಾಲಹಳ್ಳಿ ಗ್ರಾಮದ ಸಮೀಪಕ್ಕೆ ಬಂದಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೇಳೆ ಇಬ್ಬರು ವ್ಯಕ್ತಿಗಳು ಸೇರಿ ಶಂಕರ ನರನಾಳನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಕಾಳಗಿ ಪೊಲೀಸ್ ಠಾಣೆಯ ಪಿಎಸ್ಐ ತಿಮ್ಮಯ್ಯ ಬಿ.ಕೆ. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News