×
Ad

ಕಾಳಗಿ | ರಂಭಾಪುರಿ ಜಗದ್ಗುರುಗಳ ಅಡ್ಡ ಪಲ್ಲಕ್ಕಿ ಉತ್ಸವ

ಶಾಂತಿ ನೆಮ್ಮದಿಯ ಬದುಕಿಗೆ ಧರ್ಮವೊಂದೇ ಆಶಾ ಕಿರಣ : ರಂಭಾಪುರಿ ಜಗದ್ಗುರು

Update: 2026-06-16 18:14 IST

ಕಾಳಗಿ : ಭೌತಿಕ ಸಂಪತ್ತು ಎಷ್ಟಿದ್ದರೂ ಅದರಿಂದ ಶಾಂತಿ ನೆಮ್ಮದಿ ದೊರಕದು, ಪವಿತ್ರ ಧರ್ಮಾಚರಣೆಯಿಂದ ಜೀವನ ಉಜ್ವಲಗೊಳ್ಳುವುದು ಎಂದು ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಮಂಗಳವಾರ ತಾಲೂಕಿನ ಗೊಣಗಿ ಗ್ರಾಮದ ನೂತನ ಹನುಮಾನ್ ದೇವಸ್ಥಾನದ ಉದ್ಘಾಟನೆ-ಕಳಸಾರೋಹಣ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಹೊನ್ನಕಿರಣಗಿ ಚಂದ್ರಗುಂಡ ಶಿವಾಚಾರ್ಯರು ಆಶಿರ್ವಚನ ನೀಡಿ, ವೀರಶೈವ ಧರ್ಮ ಸಂಸ್ಕೃತಿಯ ಕುರಿತು ಮಾತನಾಡಿದರು. ಮೇಕರ ಹಿರೇಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮಿಗಳು ದೇವಾಲಯ ಸಂಸ್ಕೃತಿ ಮತ್ತು ಅದರ ಪರಿಣಾಮ ಕುರಿತು ಉಪದೇಶ ನೀಡಿದರು.

ನರನಾಳ ಶಿವಕುಮಾರ್ ಶಿವಾಚಾರ್ಯರು, ಆಂದೋಲಾ ಸಿದ್ಧಲಿಂಗ ಶಿವಾಚಾರ್ಯರು, ಮಂಗಲಗಿ ತೆಂಗಳಿ ಪೂಜ್ಯ ಡಾ. ಶಾಂತಸೋಮನಾಥ ಶಿವಾಚಾರ್ಯರು, ಕೊಡ್ಲಿ ಬಸವಲಿಂಗ ಶಿವಾಚಾರ್ಯರು, ರಟಕಲ್ ರೇವಣಸಿದ್ಧ ಶಿವಾಚಾರ್ಯರು, ಹೊಸಳ್ಳಿ ಸಿದ್ಧಲಿಂಗ ಶಿವಾಚಾರ್ಯರು, ಐನಾಪುರ ಉಪಮನ್ಯ ಶಿವಾಚಾರ್ಯರು, ಚಂದನಕೇರಾ ಅಭಿನವ ರಾಚೋಟೇಶ್ವರ ಶಿವಾಚಾರ್ಯರು, ಸೋನಾಲಗಿರಿ ಪರ್ವತಲಿಂಗ ಪರಮೇಶ್ವರ ಮಹಾರಾಜ ಸಾನಿಧ್ಯ ವಹಿಸಿದ್ದರು. ಕೆ.ಪಿ.ಸಿ.ಸಿ.ಉಪಾಧ್ಯಕ್ಷ ಸುಭಾಷ ರಾಠೋಡ ಮಾತನಾಡಿದರು.

ಜೆಡಿಎಸ್ ರಾಜ್ಯ ಕಾರ್ಯಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಮುಖಂಡರಾದ ಮಲ್ಲಿನಾಥ ಪಾಟೀಲ ಕಾಳಗಿ, ಶಿವರಾಜ ಪಾಟೀಲ ಗೊಣಗಿ, ರಾಮಚಂದ್ರ ಜಾಧವ್, ಮಲ್ಲಿಕಾರ್ಜುನ ಪಾಟೀಲ ಹುಳಗೇರಿ, ರೇವಶೆಟ್ಟಿ ಪಾಟೀಲ, ಮಲ್ಲಿಕಾರ್ಜುನ ಗಾಜರೆ, ಇಮ್ತಿಯಾಜ್ ಅಲಿ, ರಾಜು ಜಾಧವ್, ದತ್ತಾತ್ರೇಯ ರಾಯಗೋಳ, ವೀರಣ್ಣ ಗಂಗಾಣಿ ಸೇರಿದಂತೆ ಮೊದಲಾದವರು ಇದ್ದರು. ವಿವೇಕ ಸ್ವಾಮಿ ನಿರೂಪಿಸಿ ವಂದಿಸಿದರು.

ಕಾರ್ಯಕ್ರಮಕ್ಕೂ ಮೊದಲು ರೇವಗ್ಗಿ(ರಟಕಲ್) ರೇವಣಸಿದ್ದೇಶ್ವರ ದೇವಸ್ಥಾನಕ್ಕೆ ‌ರಂಭಾಪುರಿ ಜಗದ್ಗುರುಗಳು ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ‌ರೇವಣಸಿದ್ದೇಶ್ವರ ಗುಡ್ಡದಲ್ಲಿ ಗೋಣಗಿ ಗ್ರಾಮದ ಹನುಮಾನ್ ಮಂದಿರದವರೆಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಂಭಾಪುರಿ ಜಗದ್ಗುರುಗಳ ಅಡ್ಡ ಪಲ್ಲಕ್ಕಿ ಉತ್ಸವ ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಜರುಗಿತು. ತದನಂತರ ಜಗದ್ಗುರುಗಳ ಅಮೃತ ಹಸ್ತದಿಂದ ನೂತನ ಹನುಮಾನ್ ಮಂದಿರ ಉದ್ಘಾಟನೆ ಹಾಗೂ ಕಳಸಾರೋಹಣ ಜರುಗಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News