×
Ad

ಕಲ್ಯಾಣ ಕರ್ನಾಟಕ ಉತ್ಸವ : ಸರ್ದಾರ್ ಪಟೇಲ್ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಗೌರವ ನಮನ

Update: 2025-09-17 15:38 IST

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿ ನಗರದ ತಿಮ್ಮಪುರಿ ಸರ್ಕಲ್‌ನಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಹೈದರಾಬಾದ್ ಕರ್ನಾಟಕ ವಿಮೋಚನೆಯ ಹರಿಕಾರನಿಗೆ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಡಿ.ಎಸ್.ಸುಧಾಕರ್, ಪ್ರಿಯಾಂಕ್ ಖರ್ಗೆ, ಭೈರತಿ ಸುರೇಶ, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯರು ಶಶೀಲ್ ನಮೋಶಿ, ತಿಪ್ಪಣಪ್ಪ ಕಮಕನೂರು, ಜಗದೇವ ಗುತ್ತೇದಾರ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವೆಂದ್ರಪ್ಪ ಮರತೂರು ಸೇರಿದಂತೆ ಅನೇಕ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದೇ ವೇಳೆ, ಹೋರಾಟಗಾರ ಲಕ್ಷ್ಮಣ ದಸ್ತಿ ನೇತೃತ್ವದ ಕಲ್ಯಾಣ ಕರ್ನಾಟಕ ಭಾಗದ ಹೋರಾಟಗಾರರು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಪ್ರತ್ಯೇಕ ಇಲಾಖೆ ಸೃಜಿಸಿ ಸರ್ಕಾರಿ ಆದೇಶ ಹೊರಡಿಸಿದಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಪತ್ರ ಸಲ್ಲಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News