×
Ad

ನ.8ರಂದು ಕನಕದಾಸರ ಜಯಂತಿ ಅರ್ಥಪೂರ್ಣ ಆಚರಣೆ: ಸಕಲ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸೂಚನೆ

Update: 2025-10-29 19:39 IST

ಕಲಬುರಗಿ: ಸಂತ ಶ್ರೇಷ್ಟ ಕನಕದಾಸರ ಜಯಂತಿ ಕಾರ್ಯಕ್ರಮ ನ.8 ರಂದು ಕಲಬುರಗಿ ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಣೆಗೆ ನಿರ್ಧರಿಸಲಾಗಿದ್ದು, ಸಕಲ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಜಯಂತಿ ಕಾರ್ಯಕ್ರಮ ಆಚರಿಸಲಾಗುತ್ತದೆ ಎಂದರು.

ಜಯಂತಿಗೆ ಶಿಷ್ಟಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಚುನಾಯಿತ ಜನಪ್ರತಿನಿಧಿಗಳನ್ನು ಆಹ್ವಾನಿಸಲು, ಕನಕದಾಸರ ಜೀವನದ ಕುರಿತು ಬೆಳಕು ಚೆಲ್ಲುವ ಓರ್ವ ತಜ್ಞ ಉಪನ್ಯಾಸಕರಿಂದ ಉಪನ್ಯಾಸ ಆಯೋಜಿಸಲು ಸಹ ಸಭೆ ಒಪ್ಪಿಗೆ ಸೂಚಿಸಿತ್ತು.

ಜಿಲ್ಲಾಡಳಿತದಿಂದ ಆಯೋಜನೆಯ ಕಾರ್ಯಕ್ರಮ ಅರ್ಥಪೂರ್ಣ ಅಚರಿಸಬೇಕಿರುವ ಹಿನ್ನೆಲೆಯಲ್ಲಿ ಅಂದು ರಂಗಮಂದಿರ ಆವರಣ ಸ್ವಚ್ಛತೆ ಕಾಪಾಡಬೇಕು. ಕುಡಿಯುವ ನಿರಿನ ವ್ಯವಸ್ಥೆ ಮಾಡಬೇಕು. ವಿದ್ಯುತ್ ಕಡಿತವಾಗದಂತೆ ನೋಡಿಕೊಳ್ಳಬೇಕು. ಕಾಲೇಜು ಮಕ್ಕಳು ಮತ್ತು ಚುನಾಯಿತ ಪ್ರತಿನಿಧಿಗಳು ಅಗಮಿಸುವುದರಿಂದ ಸೂಕ್ತ‌ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಎ.ಡಿ.ಸಿ ಸೂಚಿಸಿದರು.

ಇನ್ನು ತಾಲೂಕು ಮಟ್ಟದಲ್ಲಿಯೂ ಅರ್ಥಪೂರ್ಣವಾಗಿ ಕನಕದಾಸರ ಜಯಂತಿ ಆಚರಣೆಗೆ ತಾಲೂಕಿನ ತಹಶೀಲ್ದಾರರು ಪೂರ್ವಭಾವಿ ಸಭೆ ಕರೆದು ಅಗತ್ಯ ಕ್ರಮ ಕೈಗೊಳ್ಳಬೇಕು‌‌ ಎಂದ ಅವರು, ಎಲ್ಲಾ ಸರ್ಕಾರಿ, ಶಾಲಾ-ಕಾಲೇಜುಗಳಲ್ಲಿ ಕನಕದಾಸರ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಬೇಕೆಂದರು. ಈ ಬಗ್ಗೆ ಸುತ್ತೋಲೆ ಹೊರಡಿಸುವಂತೆ ಸೂಚಿಸಿದರು.

ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ಗುರುನಾಥ ಪೂಜಾರಿ ಮಾತನಾಡಿದರು.

ಸಭೆಯಲ್ಲಿ‌ ಶಿಷ್ಠಾಚಾರ ತಹಶೀಲ್ದಾರ ಉಮಾಕಂತ ಹಲ್ಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಲಾಖೆಯ ಉಪನಿರ್ದೇಶಕಿ ಜಗದೀಶ್ವರಿ ಅ. ನಾಶಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ಉಪಾಧ್ಯಕ್ಷ ನಾಗೇಂದ್ರ ಪೂಜಾರಿ, ಜಿಲ್ಲಾ ಘಟಕದ ನಿರ್ದೇಶಕರಾದ ಕುಪೇಂದ್ರ ಬರಗಾಲಿ, ಶಿಬಲಿಂಗಪ್ಪ ಸಾವಳಗಿ, ಜಗನ್ನಾಥ ನಾಗೂರಣ ನಿರ್ಮಕಾ ಬರಗಾಲಿ ಸೇರಿದಂತೆ ಸಮಾಜದ‌ ಅನೇಕ ಮುಖಂಡರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News