ಕಲಬುರಗಿ: ಕರ್ನಾಟಕ ಸಂಘಟನಾ ವೇದಿಕೆಯ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಕನ್ನಡದ ಹಬ್ಬ’ ಸಂಗೀತ, ಉಪನ್ಯಾಸ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಶನಿವಾರ ಅದ್ದೂರಿಯಾಗಿ ಜರುಗಿತು.

ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಂಡ ಕನ್ನಡದ ಖ್ಯಾತ ಹಿನ್ನೆಲೆ ಗಾಯಕ ಹಾಗೂ ರಾಪರ್ ಎಸ್.ಆರ್.ಎನ್. ಅವರು ಸಂಗೀತ ಕಾರ್ಯಕ್ರಮದ ಮೂಲಕ ಪ್ರೇಕ್ಷಕರಿಗೆ ರಸದೌತಣ ನೀಡಿದರು. ಉಡುಪಿಯಿಂದ ಆಗಮಿಸಿದ್ದ ನಿತಿನ್ ಪೂಜಾರಿ ಅವರು ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಮಹತ್ವದ ಕುರಿತು ಉಪನ್ಯಾಸ ನೀಡಿದರು.

ಡಾ. ಸುರೇಶ್ ಶರ್ಮ ಕಾರ್ಯಕ್ರಮ ಉದ್ಘಾಟಿಸಿದರೆ, ಶ್ಯಾಮ್ ಕಂದೇವಾಲ್ ಜ್ಯೋತಿ ಬೆಳಗಿಸಿದರು. ಕಾಂಗ್ರೆಸ್‌ನ ಹಿರಿಯ ಮುಖಂಡ ನೀಲಕಂಠರಾವ್ ಮೂಲಗೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭಿಷೇಕ್ ಬಾಲಾಜಿ ವಹಿಸಿದ್ದರು.

ಕರ್ನಾಟಕ ಸಂಘಟನಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಗುರು ಬಂಡಿ, ಉದ್ಯಮಿಗಳಾದ ಸೌರಭ ಶಿವಣಕರ್, ಸಿದ್ದು ಬದ್ರಶೆಟ್ಟಿ, ಸಂಪತ್ ಹಿರೇಮಠ, ದೊಡ್ಡಪ್ಪ ಪೂಜಾರಿ ಹುಂಡೆಕಲ್, ರಾಜೇಶ್ವರಿ ಸಾಹು, ವಿಜಯಕುಮಾರ್ ಕಟ್ಟಿಮನಿ, ಡಾ. ಪಿ.ಎನ್. ರಾವ್, ಅಲ್ಲಮಪ್ರಭು ಮಠಪತಿ ಹಾಗೂ ಸುಪ್ರಿಯ ಮಠಪತಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ