ಸಂಗೀತಾ ಕಟ್ಟಿಮನಿ, ರಾಜಾಸಾಬ್ ಎಚ್., ಡಾ.ಶಿವಾನಂದ ಮಹಾಸ್ವಾಮೀಜಿ

ಕಲಬುರಗಿ: ರಾಜ್ಯ ಸರ್ಕಾರ 2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ 71 ಸಾಧಕರ ಪಟ್ಟಿಯಲ್ಲಿ ಕಲಬುರಗಿ ಮೂಲದ ಮೂವರು ಸ್ಥಾನ ಪಡೆದಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಸಾಧನೆಗಾಗಿ ಪ್ರೊ.ರಾಜಾಸಾಬ್ ಎ.ಎಚ್., ಸಮಾಜಸೇವೆ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಡಾ.ಶಿವಾನಂದ ಮಹಾಸ್ವಾಮೀಜಿ ಹಾಗೂ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಸಂಗೀತಾ ಕಟ್ಟಿಮನಿ ಅವರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕಲಬುರಗಿ ಜಿಲ್ಲೆಯ ಮೂವರು ಸಾಧಕರಿಗೆ ರಾಜ್ಯಮಟ್ಟದ ಈ ಪ್ರತಿಷ್ಠಿತ ಗೌರವ ಲಭಿಸಿರುವುದು ಜಿಲ್ಲೆಯ ಜನರಲ್ಲಿ ಸಂತಸ ಮೂಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor