×
Ad

ಚಿತ್ತಾಪುರ ತಾಲೂಕು ಆಡಳಿತದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

ಕರ್ನಾಟಕ ರಾಜ್ಯೋತ್ಸವ ಕನ್ನಡಾಭಿಮಾನವನ್ನು ಮೆರೆಯುವ ದಿನ: ಹಿರೇಮಠ

Update: 2025-11-01 11:10 IST

ಕಲಬುರಗಿ: ಕನ್ನಡ ನಾಡು ಉದಯವಾದ ಈ ದಿನವನ್ನು ಸಂಭ್ರಮಿಸುವ ಹಾಗೂ ಕನ್ನಡ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸಿ, ಗೌರವಿಸುವ ಹಾಗೂ ಕನ್ನಡಾಭಿಮಾನವನ್ನು ಮೆರೆಯುವ ಉದ್ದೇಶದಿಂದ ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ ಎಂದು ಚಿತ್ತಾಪುರ ತಹಶೀಲ್ದಾರ ನಾಗಯ್ಯ ಹಿರೇಮಠ ಹೇಳಿದರು.

ಚಿತ್ತಾಪುರ ಪಟ್ಟಣದ ಪ್ರಜಾಸೌಧ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಮೈಸೂರು ರಾಜ್ಯವು (ಈಗಿನ ಕರ್ನಾಟಕ) 1956 ರ ನವೆಂಬರ್ 1 ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.

ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಕಲ್ಲಕ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಹ್ಮದ್ ಅಕ್ರಂ ಪಾಷಾ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ ಚವ್ಹಾಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಕಸಾಪ ಅಧ್ಯಕ್ಷ ವೀರಭದ್ರಪ್ಪ ಗುರುಮಿಠಕಲ್, ಪಿಎಸ್‌ಐ ಮಂಜುನಾಥ ರೆಡ್ಡಿ, ಕರವೇ ತಾಲೂಕು ಅಧ್ಯಕ್ಷ ನರಹರಿ ಕುಲಕರ್ಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ಕಾಶಿನಾಥ ಗುತ್ತೇದಾರ, ಶಂಕರ ಕಣ್ಣಿ, ಪ್ರಲ್ಹಾದ ವಿಶ್ವಕರ್ಮ, ರಾಜಣ್ಣ ಕರದಾಳ, ವಿಜಯಕಯಮಾರ ಸಣ್ಣೂರಕರ್, ಮೈನೋದ್ದೀನ್, ಮಹ್ಮದ್ ಸುಭಾನ, ಶ್ವೇತಾ, ದತ್ತು ಜಾನೆ ಸೇರಿದಂತೆ ಇತರರು ಇದ್ದರು.

ಇದೇ ವೆಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಮುನ್ನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭುವನೇಶ್ವರಿ ದೇವಿಯ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News